ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಯುವಕರ ಬಂಧನ

ವಿಜಯಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಶನಿವಾರ ಬಂಧಿಸಲಾಗಿದೆ. ಬಂಧಿತರನ್ನು ಸದ್ದಾ ಶೇಕ್ ಮತ್ತು ರವಿ ಎಂದು ಗುರುತಿಸಲಾಗಿದ್ದು, ಇವರು ರದ್ದಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ.

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಶನಿವಾರ ಬಂಧಿಸಲಾಗಿದೆ.

ಬಂಧಿತರನ್ನು ಸದ್ದಾ ಶೇಕ್ ಮತ್ತು ರವಿ ಎಂದು ಗುರುತಿಸಲಾಗಿದ್ದು, ಇವರು ರದ್ದಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ.
ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ಸಂತ್ರಸ್ತೆ ಜೋರಾಪುರ ಪೇಟೆಯ ದೇವಸ್ಥಾನದಲ್ಲಿ ಭಕ್ತರು ನೀಡುವ ಭಿಕ್ಷೆಯಿಂದ ಜೀವನ ಸಾಗಿಸುತ್ತಿದ್ದರು.

ಪೊಲೀಸರ ಪ್ರಕಾರ, ಮಾರ್ಚ್ 2 ರಂದು ಸಂತ್ರಸ್ತೆ ತನ್ನ ಮನೆಗೆ ಡ್ರಾಪ್ ಮಾಡಲು ಆರೋಪಿಗಳ ಸಹಾಯವನ್ನು ಕೋರಿದಾಗ, ಅವರು ತಕ್ಷಣವೇ ಒಪ್ಪಿಕೊಂಡಿದ್ದಾರೆ. ಆದರೆ, ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.

ಆರೋಪಿಗಳು ವಯೋವೃದ್ಧ ಸಂತ್ರಸ್ತೆಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಥಳದಲ್ಲೇ ಬಿಟ್ಟು ಹೋಗಿದ್ದಾರೆ.

ಪ್ರಜ್ಞೆ ಬಂದ ನಂತರ ಸಂತ್ರಸ್ತೆ ಜಮಖಂಡಿ ರಸ್ತೆಗೆ ಬರುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆಯ ಅವಸ್ಥೆಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆರೋಪಿಗಳ ವಿವರ ಸಂಗ್ರಹಿಸಿದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT