ಮಾಜಿ ಸಿಎಂ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಾರಿಬಂದ ಪ್ಲಾಸ್ಟಿಕ್ ಚೀಲಗಳು: ಕೆಲ ಕಾಲ ಆತಂಕ ಸೃಷ್ಟಿ
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆಯೊಂದು ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಸೋಮವಾರ ನಡೆದಿದೆ.
ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆಯೊಂದು ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಸೋಮವಾರ ನಡೆದಿದೆ.
ಜೇವರ್ಗಿಯಲ್ಲಿ ನಡೆಯುತ್ತಿರವ ವಿಜಯ ಸಂಕಲ್ಪ ರಥಯಾತ್ರೆ ಸಂಬಂಧ ಯಡಿಯೂರಪ್ಪ ಜೇವರ್ಗಿಗೆ ಆಗಮಿಸಿದ್ದರು.
ಹೆಲಿಕಾಪ್ಟರ್ ಮೂಲಕ ಬಂದ ಬಿಎಸ್ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ನಲ್ಲಿ ಕಾಪ್ಟರ್ ಲ್ಯಾಂಡ್ ಆಗುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿದ್ದು, ಕೂಡಲೇ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್ನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಹೋದರು. ಇದರಿಂದಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ನಂತರ ಪೈಲೆಟ್ ಒಂದೆರಡು ಸುತ್ತು ಹೆಲಿಕಾಪ್ಟರ್ನ್ನು ಆಗಸದಲ್ಲಿಯೇ ಹಾರಾಟ ನಡೆಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದರು. ನಂತರ ಪೈಲೆಟ್ ಹೆಲಿಕಾಪ್ಟರ್'ನ್ನು ಲ್ಯಾಂಡ್ ಮಾಡಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.