ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಎಚ್ ಎಸ್ ಆರ್ ಲೇಔಟ್ ನಲ್ಲಿ ಮರಕ್ಕೆ ಕಾರು ಡಿಕ್ಕಿ, ಇಬ್ಬರ ಸಾವು

ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಹಿರಿಯ ನಾಗರಿಕರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ  ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಭಾನುವಾರ ಮುಂಜಾನೆ  ನಡೆದಿದೆ. 

ಬೆಂಗಳೂರು: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಹಿರಿಯ ನಾಗರಿಕರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ  ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಭಾನುವಾರ ಮುಂಜಾನೆ  ನಡೆದಿದೆ. 

ಚಿಕ್ಕಲಸಂದ್ರದ ನಿವಾಸಿ ಕೃಷ್ಣಮೂರ್ತಿ (65) ಮತ್ತು ಬಸವನಗುಡಿಯ ಪ್ರಕಾಶ್ ಹೆಬ್ಬಾರ್ (60) ಮೃತರು. ಅವರ ಸ್ನೇಹಿತರಾದ ವೆಂಕಟೇಶ್ ಮತ್ತು ಸಮೀರ್ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಸ್ನೇಹಿತರು ತಿರುಪತಿಗೆ ಹೋಗಿ ಮನೆಗೆ ಮರಳುತ್ತಿದ್ದ ವೇಳೆ ಎಚ್‌ಎಸ್‌ಆರ್ ಲೇಔಟ್ 14ನೇ ಮುಖ್ಯರಸ್ತೆಯಲ್ಲಿ  ವಾಹನದ ನಿಯಂತ್ರಣ ಕಳೆದುಕೊಂಡು ವೆಂಕಟೇಶ್ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃಷ್ಣಮೂರ್ತಿ ಸ್ಥಳದಲ್ಲೇ ಮೃತಪಟ್ಟರೆ, ಹೆಬ್ಬಾರ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಎಚ್‌ಎಸ್‌ಆರ್ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Toxic: ಭರ್ಜರಿ ಓಪನಿಂಗ್, ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್, ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!