ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ 100ನೇ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದರು. 
ರಾಜ್ಯ

ಬೆಂಗಳೂರು: 100ನೇ ಜನೌಷಧಿ ಕೇಂದ್ರ ಉದ್ಘಾಟನೆ

ನಗರದ ಮೂಲಸೌಕರ್ಯ, ಒಳಚರಂಡಿಗಳ ಸುಧಾರಿಸುವುದು ಮಾತ್ರವಲ್ಲದೆ ಜನರ ಅಗತ್ಯಗಳನ್ನು ಪೂರೈಸುವದಷ್ಟೇ ಅಲ್ಲ, ಸಮಾಜದ ಹಿಂದುಳಿದ ವರ್ಗದವರಿಗೆ ಕೈಗೆಟಕುವ ದರದಲ್ಲಿ ಔಷಧಗಳನ್ನು ಒದಗಿಸಲು ಹೆಚ್ಚಿನ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವೀಯ ಅವರು ಮಂಗಳವಾರ ಹೇಳಿದರು.

ಬೆಂಗಳೂರು: ನಗರದ ಮೂಲಸೌಕರ್ಯ, ಒಳಚರಂಡಿಗಳ ಸುಧಾರಿಸುವುದು ಮಾತ್ರವಲ್ಲದೆ ಜನರ ಅಗತ್ಯಗಳನ್ನು ಪೂರೈಸುವದಷ್ಟೇ ಅಲ್ಲ, ಸಮಾಜದ ಹಿಂದುಳಿದ ವರ್ಗದವರಿಗೆ ಕೈಗೆಟಕುವ ದರದಲ್ಲಿ ಔಷಧಗಳನ್ನು ಒದಗಿಸಲು ಹೆಚ್ಚಿನ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವೀಯ ಅವರು ಮಂಗಳವಾರ ಹೇಳಿದರು.

ಬೆಂಗಳೂರಿನ (ದಕ್ಷಿಣ) 100 ನೇ ಜನೌಷಧಿ ಕೇಂದ್ರ ಮತ್ತು ಕೆಎಸ್‌ಆರ್‌ಟಿಸಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರವನ್ನು ಮನ್ಸುಖ್ ಮಾಂಡವಿಯಾ ಅವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಎಲ್ಲರಿಗೂ ಔಷಧಿಗಳು ಕೈಗೆಡುವ ದರದಲ್ಲಿ ಗುಣಮಟ್ಟದ ಔಷಧಗಳು ಲಭ್ಯವಾಗುವಂತೆ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ. ಇದೂವರೆಗೆ ಭಾರತದಾದ್ಯಂತ 9000 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜನೌಷಧಿ ಕೇಂದ್ರಗಳು ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಯಾವುದೇ ಖಾಸಗಿ ಅಥವಾ ಸಾರ್ವಜನಿಕ ಘಟಕಗಳು ತಮ್ಮ ಪ್ರದೇಶದಲ್ಲಿ ಜನೌಷಧಿ ಕೇಂದ್ರವನ್ನು ಸ್ಥಾಪಿಸುವ ರೀತಿಯಲ್ಲಿಯೇ ನಿಬಂಧನೆಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.

80-90 ರಷ್ಟು ಬ್ರಾಂಡ್ ಔಷಧಿಗಳ ಮಾರುಕಟ್ಟೆ ಬೆಲೆಗಳಿಗೆ ಹೋಲಿಸಿದರೆ, ಜನೌಷಧಿ ಔಷಧಿಗಳ ಬೆಲೆಗಳು ಕನಿಷ್ಠ 50 ಪ್ರತಿಶತದಷ್ಟು ಅಗ್ಗವಾಗಿದೆ. ಕ್ಯಾನ್ಸರ್, ರಕ್ತದೊತ್ತಡ, ಮಧುಮೇಹ ಮತ್ತು ಇತರ ಹಲವಾರು ಕಾಯಿಲೆಗಳಿಗೆ ಔಷಧಿಗಳು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಸಮಾಜದ ಎಲ್ಲಾ ಸ್ತರದ ಜನರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಆದರೆ, ಬಡವರು ಮಾತ್ರ ಹೊರೆಯನ್ನು ಅನುಭವಿಸುತ್ತಾರೆ. ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಗಳು ದೊರೆಯುವುದರಿಂದ ಅಂತಹವರಿಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಬೆಂಗಳೂರಿನಲ್ಲಿ ಈಗ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ, ಆರೋಗ್ಯ ವ್ಯವಸ್ಥೆಯನ್ನು ಕೂಡ ರಚಿಸಲಾಗುತ್ತಿದೆ. ಎಲ್ಲರಿಗೂ ಆರೋಗ್ಯ ಸೇವೆ ಲಭ್ಯವಾಗುವಂತೆ ಮತ್ತು ಕೈಗೆಟಕುವಂತೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಎಲ್ಲಾ ವಾರ್ಡ್‌ಗಳಲ್ಲಿ ಕ್ಲಿನಿಕ್‌ಗಳನ್ನು ಉದ್ಘಾಟಿಸಲಾಗುತ್ತಿದೆ, 19 ಸಾರ್ವಜನಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್‌ಸಿ) ಮೇಲ್ದರ್ಜೆಗೇರಿಸಲಾಗುತ್ತಿದ್ದು, ನಾಲ್ಕು ಹೊಸ ವಿಶೇಷ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT