ಅಗ್ನಿ ಅವಘಡ 
ರಾಜ್ಯ

ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಭಾರಿ ಅಗ್ನಿ ಅವಘಡ; ಹೊತ್ತಿ ಉರಿದ ಕರ್ಲಾನ್ ಶಾಪ್

ಬೆಂಗಳೂರಿನ ಸರ್ಜಾಪುರ ರಸ್ತೆಯ ದೊಡ್ಡಕನೇಲಿಯಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಕರ್ಲಾನ್ ಹಾಸಿಗೆ ಮಳಿಗೆ ಹೊತ್ತಿ ಉರಿದಿದೆ.

ಬೆಂಗಳೂರು: ಬೆಂಗಳೂರಿನ ಸರ್ಜಾಪುರ ರಸ್ತೆಯ ದೊಡ್ಡಕನೇಲಿಯಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಕರ್ಲಾನ್ ಹಾಸಿಗೆ ಮಳಿಗೆ ಹೊತ್ತಿ ಉರಿದಿದೆ.

ಕರ್ಲಾನ್ ಶಾಪ್ ನಲ್ಲಿ ಹೊತ್ತಿಕೊಂಡ ಬೆಂಕಿ ಪಕ್ಕದ ಮಳಿಗೆಗಳಿಗೂ ಹರಡಿದ್ದು, ಈ ಮಳಿಗೆಗಳಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಜೀವಹಾನಿಯಾಗಿಲ್ಲ. ಆದರೆ ಕರ್ಲಾನ್ ಮಳಿಗೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

ಬೆಂಕಿ ಅವಘಡದ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಗ್ನಿ ಅವಘಡದಿಂದಾಗಿ ಸರ್ಜಾಪುರ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈಲರ್ ಆಗಿದೆ.

ಈ ಬೆಂಕಿ ಅವಘಡಕ್ಕೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ