ಸಿಎಂ ಬೊಮ್ಮಾಯಿ 
ರಾಜ್ಯ

ಪುನರ್ವಸತಿ ಕೇಂದ್ರಗಳಿಗೆ ಸಾಮಾನ್ಯ ಸೌಲಭ್ಯಗಳ ಜೊತೆಗೆ ಶಿಕ್ಷಣದ ವ್ಯವಸ್ಥೆ: ಸಿಎಂ ಬಸವರಾಜ ಬೊಮ್ಮಾಯಿ

ನಾಲ್ಕೈದು ಹಳ್ಳಿಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಅಕ್ಕಪಕ್ಕದಲ್ಲಿಯೇ ನಿರ್ಮಿಸಿ, ಜನರಿಗೆ ಸಾಮಾನ್ಯ ವ್ಯವಸ್ಥೆಗಳನ್ನು ನೀಡುವ ಜೊತೆಗೆ ಶಾಲಾ ಕಾಲೇಜು, ಪಾಲಿಟೆಕ್ನಿಕ್ ಕಾಲೇಜುಗಳನ್ನೂ ನಿರ್ಮಿಸುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಲಾಗುವುದು... 

ವಿಜಯಪುರ: ನಾಲ್ಕೈದು ಹಳ್ಳಿಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಅಕ್ಕಪಕ್ಕದಲ್ಲಿಯೇ ನಿರ್ಮಿಸಿ, ಜನರಿಗೆ ಸಾಮಾನ್ಯ ವ್ಯವಸ್ಥೆಗಳನ್ನು ನೀಡುವ ಜೊತೆಗೆ ಶಾಲಾ ಕಾಲೇಜು, ಪಾಲಿಟೆಕ್ನಿಕ್ ಕಾಲೇಜುಗಳನ್ನೂ ನಿರ್ಮಿಸುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಮಿ ಕಳೆದುಕೊಂಡ  ರೈತರಿಗೆ  ಪರಿಹಾರ ವಿತರಿಸಿ ಮಾತನಾಡಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಜಮೀನು ಮನೆ ಕಳೆದುಕೊಂಡಿರುವವರಿಗೆ ಪರಿಹಾರದ ದರವನ್ನು ಏಕಸ್ವರೂಪಗೊಳಿಸಿ, ಪರಿಹಾರದ ತಾರತಮ್ಯವನ್ನು ಸರಿಪಡಿಸಲು  ಸಚಿವಸಂಪುಟದಲ್ಲಿ ತೀರ್ಮಾನಿಸಿ, ಒಣಬೇಸಾಯಕ್ಕೆ  2ಲಕ್ಷದಿಂದ ಗರಿಷ್ಟ 20 ಲಕ್ಷ ರೂ.ವರೆಗೆ ಪರಿಹಾರ ನೀಡಲಾಗುತ್ತಿದೆ. ರೈತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿದೆ. ಭೂಸ್ವಾಧೀನಕ್ಕೆ ಜಮೀನು ಮನೆ ಕೊಡಲು ಇಚ್ಛಿಸದವರು ಭೂ ಸ್ವಾಧೀನದ ವಿರುದ್ಧ ನ್ಯಾಯಾಯಲಯಕ್ಕೆ ಹೋಗುವ ಅವಕಾಶದ ಬಗ್ಗೆ ಕಾನೂನು ತಜ್ಞರ ಸಲಹೆಯನ್ನು ಪಡೆಯಲಾಗುವುದು. ಆರ್ ಎಂಡ್ ಆರ್ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಮುಳವಾಡಿ, ಚಿಮ್ಮಲಗಿ ಏತ ನೀರಾವರಿ ಪ್ರದೇಶದಲ್ಲಿ 15 ಲಕ್ಷ ಎಕರೆ ಜಮೀನಿಗೆ ನೀರು ಒದಗಿಸಲಾಗುವುದು. ರೇವಣಸಿದ್ಧೇಶ್ವರ ಏತನೀರಾವರಿಗೆ ಅಡಿಗಲ್ಲು ಹಾಕಲಾಗಿದೆ ಎಂದು ತಿಳಿಸಿದರು.

ಮನೆಗಳ ನಿರ್ಮಾಣಕ್ಕೆ ವಿಶೇಷ ಯೋಜನೆ:
ಪುನರ್ವಸತಿ ಮತ್ತು ಪುನರ್ನಿಮಾಣಕ್ಕೆ ಸಂಬಂಧಿಸಿದಂತೆ, ಯೋಜನೆಗಳಿಗೆ ಜಮೀನು ಕಳೆದುಕೊಳ್ಳುವ ರೈತರ ಬದುಕು ಉತ್ತಮವಾಗಿ ರೂಪುಗೊಳ್ಳಬೇಕೆಂಬುದು ನಮ್ಮ ನೀತಿ. ಪುರ್ನವಸತಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯ, ಶಾಲೆ , ರಸ್ತೆಗಳಿಲ್ಲ ಎಂದು ಹಲವು ದೂರಗಳು ಬರುತ್ತಿವೆ. ಮನೆಕಳೆದುಕೊಳ್ಳುವವರಿಗೆ ಮನೆಯ ಪ್ರಸ್ತುತ ಬೆಲೆ ಯ ಜೊತೆಗೆ ಶೇ.20 ರಷ್ಟು ಪರಿಹಾರವನ್ನು ನೀಡುವ ಹೊಸ ಚಿಂತನೆಯನ್ನು ಮಾಡಲಾಗಿದೆ. ಪುನರ್ವಸತಿ ಮತ್ತು ಪುನರ್ನಿಮಾಣ ಕೇಂದ್ರಗಳಲ್ಲಿ ನಷ್ಟ ಅನುಭವಿಸಿದವರಿಗೆ ಜಮೀನು ನೀಡುವುದರ ಜೊತೆಗೆ ಮನೆಯನ್ನು ನಿರ್ಮಿಸಿಕೊಡುವ ವಿಶೇಷ ಯೋಜನೆಯನ್ನು ಕೈಗೊಳ್ಳಲಾಗುವುದು ಎಂದರು.

ನೀರಾವರಿಗೆ ಹೆಚ್ಚಿನ ಪ್ರಾಶಸ್ತ್ಯ:

ಕೃಷ್ಣೆಯ ತೀರದ ರೈತರು, ನದಿಯ ನೀರನ್ನು ಬಳಸುವ ವ್ಯವಸ್ಥೆ ಇರಲಿಲ್ಲ. ಇಲ್ಲಿನ ರೈತರ ಪ್ರಾಮಾಣಿಕರು ಮತ್ತು ಕಾಯಕನಿಷ್ಠೆಯುಳ್ಳವರು. ಕೃಷ್ಣೆಯ ನೀರು ಹಾಗೂ ಮಣ್ಣು ನಿಸರ್ಗ ಕೊಟ್ಟಿರುವ ವರವಾಗಿದ್ದು, ಗುಣಮಟ್ಟದ ಬೆಳೆಯನ್ನು ಇಲ್ಲಿ ಬೆಳೆಯಲಾಗುತ್ತದೆ. ವಿಜಯಪುರ, ಬೆಳಗಾವಿ, ಬಾಗಲಕೋಟೆಗಳಲ್ಲಿ ಉತ್ತಮ ಗುಣಮಟ್ಟದ ಕಬ್ಬನ್ನು ಬೆಳೆಯಲಾಗುತ್ತಿದೆ. ಪಂಚನದಿಗಳು ಹರಿಯುವ ಪ್ರದೇಶದಲ್ಲಿ ನೀರಾವರಿ ಸಮರ್ಥವಾಗಿಲ್ಲದಿರುವುದು ಚಿಂತನೆಯ ವಿಷಯವಾಗಿದ್ದು, ಈಗ ಪರಿಸ್ಥಿತಿ ಸುಧಾರಿಸುತ್ತಿದೆ. ಮೊದಲಿನಿಂದಲೂ ರಾಜ್ಯದಲ್ಲಿ ನೀರಾವರಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಬೇಕಾಗಿತ್ತು. ಈಗಲಾದರೂ ನೀರಾವರಿ ಯೋಜನೆಗಳನ್ನೂ ಪೂರ್ಣಗೊಳಿಸಿ  ಈ ಭಾಗದ ರೈತರಿಗೆ ನ್ಯಾಯ ಒದಗಿಸಬೇಕಿದೆ ಎಂದರು.

ರೈತರ ಹೊಲಗಳಿಗೆ ನೀರು:

ನಾನು ನೀರಾವರಿ ಸಚಿವನಾಗಿದ್ದಾಗ ಕೃಷ್ಣಾ ಜಲಾನಯನ ಪ್ರದೇಶದಲ್ಲಿ  ಎ ಮತ್ತು ಬಿ ಸ್ಕೀಂ ಗಳೆಂದು ನೆನೆಗುದಿಗೆ ಬಿದ್ದಿದ್ದ 9 ನೀರಾವರಿ ಯೋಜನೆಗಳಿಗೆ ಚಾಲನೆ ನೀಡಿದ್ದೇನೆ. ಮುಳವಾಡಿ, ಚಿಮ್ಮಲಗಿ, ಗುತ್ತಿಬಸವಣ್ಣ ಏತನೀರಾವರಿ ,ಕೊಪ್ಪಳ ಏತ ನೀರಾವರಿ ಸೇರಿದಂತೆ ಹಲವು ಯೋಜನೆಗಳಿಗೆ ಅಡಿಗಲ್ಲು ಹಾಕಿ, ಪಂಪ್ ಹೌಸ್ ಗಳು ನಿರ್ಮಾಣಗೊಳಿಸಿ, ನೀರು ರೈತರ ಹೊಲಗಳಿಗೆ ನೀರು ಬಂದಾಗ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ ಎಂದರು. ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಶಾಸಕ ಎಂ.ಬಿ ಪಾಟೀಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT