ಹೊಸಕೋಟೆ: ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಅವರ ವಿವರ ಪತ್ತೆಯಾಗಿಲ್ಲ.
ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.