ಗಗನಸಖಿ ಅರ್ಚನಾ 
ರಾಜ್ಯ

ಬೆಂಗಳೂರು: 4ನೇ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ

ಪ್ರಿಯಕರನನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ.

ಬೆಂಗಳೂರು: ಪ್ರಿಯಕರನನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ.

ಹಿಮಾಚಲ ಪ್ರದೇಶದ 28 ವರ್ಷದ ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿರುವ ಗಗನಸಖಿ ಎಂದು ತಿಳಿದುಬಂದಿದೆ. ಅರ್ಚನಾ ಸಾಫ್ಟ್ ವೇರ್ ಎಂಜಿನಿಯರ್ ಕೇರಳ ಮೂಲದ ಆದೇಶ್ ಎಂಬಾತನನ್ನು ಪ್ರೀತಿಸುತ್ತಿದ್ದು ಅದನ್ನು ಭೇಟಿಯಾಗಲು ನಿನ್ನೆಯಷ್ಟೆ ಬೆಂಗಳೂರಿಗೆ ಬಂದಿದ್ದು ತಡರಾತ್ರಿ 12 ಗಂಟೆ ಸುಮಾರಿನಲ್ಲಿ ಅರ್ಚನಾ ಅಪಾರ್ಟ್ ಮೆಂಟ್‍ನ 4ನೇ ಮಹಡಿಗೆ ಹೋಗಿ ಅಲ್ಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಸೇಂಟ್‍ಜಾನ್ ಆಸ್ಪತ್ರೆಗೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಕರಣ ಸಂಬಂಧ ಆದೇಶ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!