ಸಾಂದರ್ಭಿಕ ಚಿತ್ರ 
ರಾಜ್ಯ

ನಮ್ಮ ಮೆಟ್ರೋ ಮಾರ್ಗಗಳಲ್ಲಿ ಸುರಕ್ಷತೆ ಕ್ರಮಗಳ ಕುರಿತು IISc ತಂಡದಿಂದ ಪರಿಶೀಲನೆ!

ಮುಂಬರುವ ಮೂರು ಮಾರ್ಗಗಳ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ಬಿಎಂಆರ್ಸಿಎಲ್ IISc ಯ ತಂಡವೊಂದನ್ನು ನಿಯೋಜಿಸಿದೆ. 

ಬೆಂಗಳೂರು: ಮುಂಬರುವ ಮೂರು ಮಾರ್ಗಗಳ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ಬಿಎಂಆರ್ಸಿಎಲ್ IISc ಯ ತಂಡವೊಂದನ್ನು ನಿಯೋಜಿಸಿದೆ. 

ಕಳೆದ ಬುಧವಾರದಿಂದಲೇ ಕೆಲಸ ಆರಂಭಿಸಿರುವ ತಂಡ 75 ದಿನಗಳಲ್ಲಿ ವರದಿ ನೀಡುವ ಸಾಧ್ಯತೆ ಇದೆ. ನಿರ್ಮಾಣ ಹಂತದಲ್ಲಿರುವ ಹೊರ ವರ್ತುಲ ರಸ್ತೆ ಮಾರ್ಗ (ಕೆಆರ್ ಪುರಂನಿಂದ ಸಿಲ್ಕ್ ಬೋರ್ಡ್), ವಿಮಾನ ನಿಲ್ದಾಣ ಮಾರ್ಗ (ಕೆಆರ್ ಪುರಂನಿಂದ ಕೆಐಎ) ಹಾಗೂ ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ಸುರಂಗ ಕಾರಿಡಾರ್‌ಗಳನ್ನು ಮೂವರು ಸದಸ್ಯರ ತಂಡ ಪರಿಶೀಲಿಸಲಿದೆ. 

ಕಳೆದ ಜನವರಿ 10ರಂದು ನಾಗವಾರದ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ವೊಂದು ಮಹಿಳೆ ಮತ್ತು ಆಕೆಯ ಮಗನ ಮೇಲೆ ಬಿದ್ದು ಸಾವನ್ನಪ್ಪಿದ್ದರು. ಅಲ್ಲದೆ ಬಿಎಂಆರ್‌ಸಿಎಲ್‌ನ ಬ್ಯಾರಿಕೇಡ್‌ಗಳು ಮತ್ತು ಸಿಂಕ್‌ಹೋಲ್‌ಗಳನ್ನು ಒಳಗೊಂಡ ಸಣ್ಣ ಅಪಘಾತಗಳು ಕಳೆದ ತಿಂಗಳು ಸಂಭವಿಸಿತ್ತು. ಇದು ಸಾರ್ವಜನಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಬಿಎಂಆರ್ಸಿಎಲ್ ಈ ಉಪಕ್ರಮವನ್ನು ಕೈಗೊಂಡಿದೆ.

ತಂಡದ ಸದಸ್ಯರು: ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಜೆ.ಎಂ.ಚಂದ್ರ ಕಿಶನ್, ಸುಸ್ಥಿರ ತಂತ್ರಜ್ಞಾನಗಳ ಕೇಂದ್ರದ ಸಹ ಪ್ರಾಧ್ಯಾಪಕ ಲಕ್ಷ್ಮೀನಾರಾಯಣ ರಾವ್ ಮತ್ತು ಮೂಲಸೌಕರ್ಯ, ಸುಸ್ಥಿರ ಸಾರಿಗೆ ಮತ್ತು ನಗರ ಯೋಜನೆ ಕೇಂದ್ರದಲ್ಲಿ ಈ ಹಿಂದೆ ಕೆಲಸ ಮಾಡಿದ ರಮೇಶ್ ಬಾಬು ನಾರಾಯಣಪ್ಪ ಪರಿಶೀಲನೆ ನಡೆಸಲಿದ್ದಾರೆ.

ಪ್ರೊ.ಕಿಶನ್ ಮಾತನಾಡಿ, ಮೆಟ್ರೊ ನಿರ್ಮಾಣದ ಸ್ಥಳಗಳಲ್ಲಿ ಬ್ಯಾರಿಕೇಡಿಂಗ್ ಸೇರಿದಂತೆ ಎಲ್ಲ ಸುರಕ್ಷತಾ ಅಂಶಗಳನ್ನು ಪರಿಶೀಲಿಸುತ್ತೇವೆ. ನಾವು ಒದಗಿಸಿದ ಮಾರ್ಗಸೂಚಿಗಳನ್ನು ಅಧ್ಯಯನ ಮಾಡುತ್ತೇವೆ ಮತ್ತು ಗುತ್ತಿಗೆದಾರರು ಅವುಗಳನ್ನು ಅನುಸರಿಸುತ್ತಿದ್ದಾರೆಯೇ ಎಂದು ಪರಿಶೀಲಿಸುತ್ತೇವೆ. ಸೈಟ್‌ಗಳಲ್ಲಿ ಟ್ರಾಫಿಕ್ ದೃಶ್ಯ ಮತ್ತು ಹತ್ತಿರದ ಜಂಕ್ಷನ್‌ಗಳನ್ನು ಸಹ ವಿವರವಾಗಿ ಪರಿಶೀಲಿಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ, ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 6 ಕ್ಕೇರಿಕೆ

Jammu: ದೇಶ ವಿರೋಧಿ ಚಟುವಟಿಕೆ ಆರೋಪ, 'ಕಾಶ್ಮೀರ್ ಟೈಮ್ಸ್' ಕಚೇರಿ ಮೇಲೆ ದಾಳಿ, AK-47 ಕಾರ್ಟ್ರಿಡ್ಜ್‌ಗಳು ಪತ್ತೆ!

ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿ ಘೋಷಣೆ, ಯಾವಾಗಿಂದ ಗೊತ್ತಾ?

ಯಾವ ಕ್ರಾಂತಿಯು ಇಲ್ಲ, ಕೇವಲ ''ಮಾಧ್ಯಮ ಸೃಷ್ಟಿ''; ನನ್ನ ಸ್ಥಾನ ಈಗಲೂ ಗಟ್ಟಿ, ಮುಂದೆಯೂ ಗಟ್ಟಿ; Video

SCROLL FOR NEXT