ದೀಪಕ್ ಗೌಡ 
ರಾಜ್ಯ

ಹಂಪಿ ಸ್ಮಾರಕದ ಮೇಲೆ ನೃತ್ಯದ ರೀಲ್ಸ್ ಮಾಡಿ ಬಂಧನಕ್ಕೊಳಗಾಗಿದ್ದ ದೀಪಕ್ ಗೌಡಗೆ ಜಾಮೀನು

ರೀಲ್ಸ್​ಗಾಗಿ ಹಂಪಿಯ 14ನೇ ಶತಮಾನದ ಸ್ಮಾರಕವನ್ನೇರಿ ನೃತ್ಯ ಮಾಡಿ ಬಂಧನಕ್ಕೊಳಗಾಗಿದ್ದ ಇನ್ ಸ್ಟಾಗ್ರಾಂ ಖ್ಯಾತಿಯ ದೀಪಕ್ ಗೌಡಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಹೊಸಪೇಟೆ: ರೀಲ್ಸ್​ಗಾಗಿ ಹಂಪಿಯ 14ನೇ ಶತಮಾನದ ಸ್ಮಾರಕವನ್ನೇರಿ ನೃತ್ಯ ಮಾಡಿ ಬಂಧನಕ್ಕೊಳಗಾಗಿದ್ದ ಇನ್ ಸ್ಟಾಗ್ರಾಂ ಖ್ಯಾತಿಯ ದೀಪಕ್ ಗೌಡಗೆ (28) ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಹಂಪಿಯ ಹೇಮಕೂಟ ಬೆಟ್ಟದಲ್ಲಿ ದೀಪಕ್ ಗೌಡ ಕುಣಿದು ಕುಪ್ಪಳಿಸುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಸಂಬಂಧ ಹಂಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಗೌಡರ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ ಪೊಲೀಸರು ದೀಪಕ್ ನನ್ನು ಬಂಧನಕ್ಕೊಳಪಡಿಸಿದ್ದರು.

ಹೊಸಪೇಟೆ ತಾಲೂಕು ನ್ಯಾಯಾಲಯ ದೀಪಕ್'ಗೆ ಜಾಮೀನು ಮಂಜೂರು ಮಾಡಿದೆ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಫೆಬ್ರವರಿ 27 ರಂದು ಘಟನೆ ವರದಿಯಾಗಿದ್ದು. ಆರೋಪಿಯನ್ನು ಮಾರ್ಚ್ ಮೊದಲ ವಾರದಲ್ಲಿ ಬಂಧಿಸಲಾಯಿತು. ವಿಡಿಯೋ ವೈರಲ್ ಆದ ಬಳಿಕ ತಲೆಮರೆಸಿಕೊಂಡಿದ್ದ ಆತನನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿತ್ತು. 2 ಲಕ್ಷ ರೂ.ಗಳ ಶ್ಯೂರಿಟಿ ಮೇಲೆ ಇದೀಗ ದೀಪಕ್'ನನ್ನು ಬಿಡುಗಡೆ ಮಾಡಲಾಗಿದೆ. ಜಾಮೀನು ಆದೇಶದಲ್ಲಿನ ಷರತ್ತುಗಳ ಪ್ರಕಾರ ಆರೋಪಿಯು ಪ್ರತಿ ತಿಂಗಳು ಹಂಪಿ ಠಾಣೆಗೆ ಭೇಟಿ ನೀಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಯಮ ಉಲ್ಲಂಘಿಸುವವರಿಗೆ ಈ ಘಟನೆ ತಕ್ಕ ಪಾಠವಾಗಲಿದೆ ಎಂದು ಹಂಪಿ ಮಾರ್ಗದರ್ಶಕರ ಸಂಘದ ಸದಸ್ಯರು ಹೇಳಿದ್ದಾರೆ.

ಹಂಪಿ ಒಂದು ಸೂಕ್ಷ್ಮ ಸ್ಥಳವಾಗಿದೆ. ಪ್ರವಾಸಿಗರು ಸ್ಮಾರಕಗಳಿಗೆ ಮತ್ತು ಸ್ಥಳೀಯ ಸಂಸ್ಕೃತಿಗೆ ಅಗೌರವ ತೋರಿಸಲು ಪ್ರಯತ್ನಿಸಿದರೆ ಅದು ಜನರನ್ನು ಪ್ರಚೋದಿಸಿದಂತಾಗುತ್ತದೆ. ಇಲ್ಲಿನ ಕೆಲವು ದೇವಾಲಯಗಳಲ್ಲಿ ದಿನನಿತ್ಯದ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುತ್ತದೆ. ಆದರೆ, ಕೆಲವೊಮ್ಮೆ ಪ್ರವಾಸಿಗರು ಮದ್ಯ ಸೇವಿಸಿ ಇಲ್ಲಿಗೆ ಬಂದು ಫೋಟೋ ಶೂಟ್ ಮಾಡುತ್ತಾರೆಂದು ಗೈಡ್ ಒಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT