ಸಂಗ್ರಹ ಚಿತ್ರ 
ರಾಜ್ಯ

ಮಾರ್ಚ್ ಅಂತ್ಯದೊಳಗೆ ಬಿಎಂಟಿಸಿ 'ನಿಮ್ ಬಸ್' ಆ್ಯಪ್ ಬಿಡುಗಡೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಹು ನಿರೀಕ್ಷಿತ ನಿಮ್ ಬಸ್ ಆ್ಯಪ್ ಮಾರ್ಚ್ ಅಂತ್ಯದೊಳಗೆ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಹು ನಿರೀಕ್ಷಿತ ನಿಮ್ ಬಸ್ ಆ್ಯಪ್ ಮಾರ್ಚ್ ಅಂತ್ಯದೊಳಗೆ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಆರಂಭದಲ್ಲಿ ಈ ಆ್ಯಪ್ ಡಿಸೆಂಬರ್ 23 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ನಂತರ ಈ ದಿನಾಂಕವನ್ನು ಮುಂದೂಡಲಾಗಿತ್ತು. ನಂತರ ಗಣರಾಜ್ಯೋತ್ಸವ ದಿನದಂದು ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಆ ದಿನವೂ ಆ್ಯಪ್'ನ್ನು ಬಿಡುಗಡೆ ಮಾಡಲಾಗಿಲ್ಲ. ಸೀಮಿತ ಜನರಿಗಷ್ಟೇ ಆ್ಯಪ್ ಬಳಕೆಗೆ ಬಿಎಂಟಿಸಿ ಅವಕಾಶ ನೀಡಿತ್ತು. ಈ ವೇಳೆ ಆ್ಯಪ್ ನಲ್ಲಿ ಕೆಲ ದೋಷಗಳು ಕಂಡು ಬಂದಿದ್ದು, ಇದನ್ನು ಸರಿಪಡಿಸಿ, ಆ್ಯಪ್'ಗೆ ಹೊಸ ಹೆಸರು ನೀಡಲು ಬಿಎಂಟಿಸಿ ಮುಂದಾಗಿತ್ತು. ಇದೀಗ ಹೊಸ ಹೆಸರಿನೊಂದಿಗೆ ಆ್ಯಪ್ ಬಿಡುಗಡೆ ಮಾಡಲು ಬಿಎಂಟಿಸಿ ಮುಂದಾಗಿದೆ.

ಮಾರ್ಚ್ ಅಂತ್ಯದೊಳಗೆ ಆ್ಯಪ್ ನಲ್ಲಿರುವ ಲೋಪದೋಷಗಳನ್ನು ಕಂಡು ಹಿಡಿದು ಅದನ್ನು ಸರಿಪಡಿಸಲಾಗುತ್ತದೆ ಎಂದು ಬಿಎಂಟಿಸಿ ಎಂಡಿ ಸತ್ಯವತಿ ಅವರು ಹೇಳಿದ್ದಾರೆ.

ಪ್ರಯಾಣಕ್ಕೆ ಸಂಬಂಧಿಸಿದಂತೆ ಆ್ಯಪ್ ನಲ್ಲಿ ಕೆಲವು ಸಮಸ್ಯೆಗಳು ಕಂಡು ಬಂದಿವೆ. ಅಂದಾಜು ಸಮಯ, ಮಾರ್ಗಗಳ ವಿವರಗಳ ಕುರಿತು ಆ್ಯಪ್ ನಲ್ಲಿ ಕೆಲಸಗಳು ನಡೆಯಬೇಕಿದೆ. ಈ ಕುರಿತು ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

IOS ಮತ್ತು Andriod ಬಳಕೆದಾರರನ್ನು ಒಳಗೊಂಡ 10 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ನಿರೀಕ್ಷಿಸಲಾಗುತ್ತಿದೆ. ಇಂಗ್ಲಿಷ್ ಮತ್ತು ಕನ್ನಡದಲ್ಲಿ ಆ್ಯಪ್ ಲಭ್ಯವಾಗಲಿದೆ. ಪ್ರಯಾಣಿಕರಿಗೆ ಬಿಎಂಟಿಸಿ ಬಸ್‌ಗಳನ್ನು ನೈಜ ಸಮಯದಲ್ಲಿ ಟ್ರ್ಯಾಕ್ ಮಾಡಲು ಆ್ಯಪ್ ಅನುವು ಮಾಡಿಕೊಡಲಿದೆ. ಮಾರ್ಗಗಳ ವಿವರಗಳು ಮತ್ತು ಟಿಕೆಟ್ ದರಗಳನ್ನು ಆ್ಯಪ್ ಒದಗಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT