ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜನರಿಗೆ 433 ಹೊಲಿಗೆ ಯಂತ್ರಗಳನ್ನು ವಸತಿ ಸಚಿವ ವಿ.ಸೋಮಣ್ಣ ಮಂಗಳವಾರ ವಿತರಿಸಿದರು. 
ರಾಜ್ಯ

ಹಣದ ಆಮಿಷಕ್ಕೆ ಮರುಳಾಗದಿರಿ: ಮತದಾರರಿಗೆ ಸಚಿವ ವಿ.ಸೋಮಣ್ಣ ಮನವಿ

ಹಣದ ಆಮಿಷಕ್ಕೆ ಮರುಳಾಗದಿರಿ ಎಂದು ಮತದಾರರಿಗೆ ವಸತಿ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಹಣದ ಆಮಿಷಕ್ಕೆ ಮರುಳಾಗದಿರಿ ಎಂದು ಮತದಾರರಿಗೆ ವಸತಿ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ ಮೈದಾನದಲ್ಲಿ, ಸ್ವಾವಲಂಬಿ ಜೀವನ ಸಾಗಿಸಲು 433 ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಸಚಿವರು ಮಾತನಾಡಿದರು.

ರಾತ್ರಿ ವೇಳೆಯಲ್ಲಿ ಹಣ ಹಂಚಿ ಆಮಿಷ ಒಡ್ಡುವವರಿಗೆ ಜನರು ಮರುಳಾಗಬಾರದು. ಯಾವ ಯಾವ ಕಾಮಗಾರಿಗಳು ನಡೆದಿದೆ ಎಂಬುದನ್ನು ನಾಗರೀಕರೇ ಮೌಲ್ಯಮಾಪನ ಮಾಡಬೇಕು ಎಂದು ಹೇಳಿದರು.

ಆಮಿಷಕ್ಕೊಳಗಾಗಿ ಪಡೆದ ಹಣ ಒಂದು-ಎರಡು ದಿನಗಳು ಮಾತ್ರ ಇರುತ್ತದೆ. ಆದರೆ, ಸಮರ್ಥ ಅಭ್ಯರ್ಥಿಗೆ ನೀಡುವ ಮತವು ಸಾರ್ವಕಾಲಿಕ ಸೇವೆಯನ್ನು ನೀಡುತ್ತದೆ ಎಂದು ತಿಳಿಸಿದರು. ಇದೇ ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೆ ಇರುವವರು ಆದಷ್ಟು ಬೇಗ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿಕೊಂಡರು.

ಹೊಲಿಗೆ ಯಂತ್ರ ವಿತರಣೆಯು ಮಹಿಳೆಯರಲ್ಲಿ ಸ್ವಾವಲಂಬನೆಯನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಕಲ್ಯಾಣ ಕಾರ್ಯಕ್ರಮದಡಿ ತರಬೇತಿ ಪಡೆದ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!