ಸಾಂದರ್ಭಿಕ ಚಿತ್ರ 
ರಾಜ್ಯ

ಮಾರ್ಚ್ 21ರಿಂದ ಆರ್‌ಟಿಸಿ ಕಾರ್ಮಿಕ ಸಂಘಟನೆಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (JAC) ಸಾರಿಗೆ ಸಚಿವ ಶ್ರೀರಾಮುಲು ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇದೇ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ಬೆಂಗಳೂರು: ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (JAC) ಸಾರಿಗೆ ಸಚಿವ ಶ್ರೀರಾಮುಲು ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇದೇ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ಇದು ರಾಜ್ಯಾದ್ಯಂತ ಬಸ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ನಿನ್ನೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಎಚ್‌ವಿ ಅನಂತ ಸುಬ್ಬರಾವ್,  “ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಮತ್ತು ಕೆಕೆಎಸ್‌ಆರ್‌ಟಿಸಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿದ್ದಾರೆ. 2016ರಿಂದ ಅವರ ವೇತನ ಪರಿಷ್ಕರಣೆಯಾಗಿಲ್ಲ.ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರವನ್ನು ಒತ್ತಾಯಿಸಿದ್ದೇವೆ. ಆದರೆ ಅವುಗಳನ್ನು ಈಡೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ.

ಮೂಲ ವೇತನದಲ್ಲಿ ಶೇಕಡಾ 25 ರಷ್ಟು ಹೆಚ್ಚಳ, ಉತ್ತಮ ಕೆಲಸದ ಸ್ಥಿತಿ, ವೈದ್ಯಕೀಯ ಸೌಲಭ್ಯಗಳು, ಕಾರ್ಮಿಕರ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ಹಿಂಪಡೆಯುವುದು ಹೀಗೆ 8 ಬೇಡಿಕೆಗಳನ್ನು ಒಕ್ಕೂಟವು ಹೊಂದಿವೆ ಎಂದು ಹೇಳಿದರು. ಸಚಿವರು ನೀಡಿದ ಶೇಕಡಾ 10 ಹೆಚ್ಚಳವನ್ನು ಸಂಘಗಳು ತಿರಸ್ಕರಿಸಿವೆ. 

ಶಾಲಾ ಕಾಲೇಜು ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ಸಂದರ್ಭದಲ್ಲೇ ಮುಷ್ಕರಕ್ಕೆ ಕರೆ ನೀಡಿರುವುದು ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Russia-Ukraine War: ರಷ್ಯಾ ದಾಳಿಯಿಂದ ಶಿಶು ಸೇರಿದಂತೆ ನಾಲ್ವರು ಸಾವು,18 ಮಂದಿಗೆ ಗಾಯ, ಪ್ರತೀಕಾರವಾಗಿ ಉಕ್ರೇನ್ ಮಾಡಿದ್ದೇನು?

ರಷ್ಯಾದಿಂದ ತೈಲ ಖರೀದಿಸಿ ಭಾರತ ಲಾಭ ಗಳಿಸುತ್ತಿದೆ ಹೇಳಿಕೆ: ಸತ್ಯ ಪರಿಶೀಲಿಸಿ ಬೂಟಾಟಿಕೆ ಎಂದ 'X', ಎಲಾನ್ ಮಸ್ಕ್ ವಿರುದ್ಧ ಪೀಟರ್ ನವರೊ ಸಿಡಿಮಿಡಿ

ತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ: ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಸನ್ನಿಹಿತ..?

ಬಾನು ಮುಷ್ತಾಕ್ ಕನ್ನಡದ ವಿರುದ್ಧ ಮಾತನಾಡಿದ್ದಕ್ಕೆ ಯಾವುದೇ ಸಾಕ್ಷಿಯಿಲ್ಲ, ನಿಸಾರ್ ಅಹ್ಮದ್ ಉದ್ಘಾಟಿಸಿದಾಗೇಕೆ ಮೌನವಾಗಿದ್ದಿರಿ?

Gadag: ಶೌಚಾಲಯ ಇಲ್ಲದ ಶಾಲೆ; ಬಹಿರ್ದೆಸೆಗೆ ಜೀವ ಕೈಯಲ್ಲಿ ಹಿಡಿದು ಹೆದ್ದಾರಿ ದಾಟುವ ಸರ್ಕಾರಿ ಶಾಲಾ ವಿದ್ಯಾರ್ಥಿಗಳು!

SCROLL FOR NEXT