ಜೆ.ಪಿ ನಡ್ಡಾ 
ರಾಜ್ಯ

ನಾಳೆಯಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶುಕ್ರವಾರದಿಂದ ಎರಡು ದಿನಗಳ ಕಾಲ ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶುಕ್ರವಾರದಿಂದ ಎರಡು ದಿನಗಳ ಕಾಲ ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೂಲಗಳ ಪ್ರಕಾರ, 'ಮಾರ್ಚ್ 17 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ನಡ್ಡಾ ಅವರು ರಥಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ರ‍್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮರುದಿನ ಅವರು ಮತ್ತೆ ರಥಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ತುಮಕೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ'. 

ಇದರೊಂದಿಗೆ ಹಲವು ಸಭೆಗಳು ನಡೆಯಲಿವೆ. ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರಿಗೆ ಪ್ರೇರಣೆ ತುಂಬಲು ಅವರನ್ನು ಭೇಟಿಯಾಗಲಿದ್ದಾರೆ.

ಮೇ ತಿಂಗಳಿಗೂ ಮುನ್ನ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಹಲವು ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ಮಾರ್ಚ್ 12 ರಂದು ಕರ್ನಾಟಕಕ್ಕೆ ಬಂದಿದ್ದ ಪ್ರಧಾನಿ ಮೋದಿ ಅವರು ಮಂಡ್ಯ ಜಿಲ್ಲೆಯಲ್ಲಿ 2 ಕಿಲೋಮೀಟರ್ ಉದ್ದದ ರೋಡ್ ಶೋ ನಡೆಸಿದರು. ಮಂಡ್ಯದಲ್ಲಿ ರೋಡ್ ಶೋ ನಡೆಸುತ್ತಿದ್ದ ಮೋದಿ ಮೇಲೆ ಬಿಜೆಪಿ ಬೆಂಬಲಿಗರು ಹಾಗೂ ಸ್ಥಳೀಯರು ಪುಷ್ಪವೃಷ್ಟಿ ಮಾಡಿದರು.

ಅಲ್ಲದೆ, ಪ್ರಧಾನಿ ಮೋದಿಯವರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಮತ್ತು ಐಐಟಿ ಧಾರವಾಡವನ್ನು ದೇಶಕ್ಕೆ ಸಮರ್ಪಿಸಿದರು ಮತ್ತು ಇತರ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನೇಪಾಳದಲ್ಲಿ ನಿಷೇಧದ ಬಗ್ಗೆ ಏನಾಯಿತು ನೋಡಿಲ್ವ?': ಅಶ್ಲೀಲ ಚಿತ್ರ ನಿಷೇಧಿಸುವಂತೆ ಕೋರಿದ್ದ ಅರ್ಜಿ ಕುರಿತು ಸುಪ್ರೀಂ ಕೋರ್ಟ್

ತೆಲಂಗಾಣ ರಸ್ತೆ ಅಪಘಾತ ಪ್ರಕರಣ: ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಪ್ರಧಾನಿ ಮೋದಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

VIDEO: 'ತಂಡದ ಸೋಲಿಗೆ ನೀವೇ ಕಾರಣ'.. ವಿಶ್ವಕಪ್ ಸೋಲಿನ ಬಳಿಕ ಸ್ವಂತ ದೇಶವನ್ನೇ ತೆಗಳಿದ ಆಫ್ರಿಕನ್ ನಟಿ Thanja

2026ರ ಮೇ ವೇಳೆಗೆ ಮೆಟ್ರೋ ಗುಲಾಬಿ ಮಾರ್ಗ ಕಾರ್ಯಾರಂಭ ಮಾಡಲಿದೆ: ಡಿಕೆ ಶಿವಕುಮಾರ್

'ಇದೆಲ್ಲ ಸುಳ್ಳು, ನಗೆಪಾಟಲಿಗೆ ಈಡಾಗುವಂತಹದ್ದು': ಪ್ರಧಾನಿ ಮೋದಿ ಹೇಳಿಕೆಯನ್ನು ತಳ್ಳಿಹಾಕಿದ ಮಲ್ಲಿಕಾರ್ಜುನ ಖರ್ಗೆ

SCROLL FOR NEXT