ಸಿಎಂ ಬೊಮ್ಮಾಯಿ 
ರಾಜ್ಯ

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ

ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಟಿಸಿಎಲ್ ನೌಕರರ ಶೇ.20 ರಷ್ಟು ವೇತನ ಮತ್ತು ಸಾರಿಗೆ ನೌಕರರ ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಹೇಳಿದರು.

ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದು. ನೌಕರರ ಸಂಘದ ಜೊತೆಗೆ ಸರ್ಕಾರ ಸರಣಿ ಮಾತುಕತೆಗಳನ್ನು ನಡೆಸುತ್ತಲೇ ಇದೆ.

ನೌಕರರ ಬೇಡಿಕೆ ಹಿನ್ನೆಲೆಯಲ್ಲಿ ಶೇ. 10 ರಷ್ಟು ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಭರವಸೆ ಕೊಟ್ಟಿದ್ದರು. ಆದರೆ. ಇದಕ್ಕೆ ಸಾರಿಗೆ ನೌಕರರು ಒಪ್ಪಿಗೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಶೇ.15 ರಷ್ಟು ಏರಿಕೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT