ಆನಂದ್ ನ್ಯಾಮಗೌಡ 
ರಾಜ್ಯ

ಬಾಗಲಕೋಟೆ: ಸಾರ್ವಜನಿಕವಾಗಿ ಪಿಎಸ್ ಐ ನಿಂದಿಸಿದ ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ!ವಿಡಿಯೋ

ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ, ಪಿಎಸ್ ಐ ಒಬ್ಬರನ್ನು ಸಾರ್ವಜನಿಕವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಬಾಗಲಕೋಟೆ: ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ, ಪಿಎಸ್ ಐ ಒಬ್ಬರನ್ನು ಸಾರ್ವಜನಿಕವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಜಮಖಂಡಿಯಲ್ಲಿ ವೃತ್ತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಬಸವರಾಜ್ ಕೊಣ್ಣೂರ ಕಾಂಗ್ರೆಸ್ ಶಾಸಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ಸ್ಥಳದಲ್ಲಿ ತಮ್ಮ ಬೆಂಬಲಿಗರ ಸಮ್ಮುಖದಲ್ಲಿ ಕರ್ತವ್ಯ ನಿರತ ಪಿಎಸ್‌ಐ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಶಾಸಕರ ವಿರುದ್ಧ ತೀವ್ರ ರೀತಿಯ ಟೀಕೆಗಳು ವ್ಯಕ್ತವಾಗುತ್ತಿವೆ.ವೃತ್ತ ನಿರ್ಮಿಸಿದರೆ ಸಮಸ್ಯೆಯಾಗುತ್ತದೆ ಎಂದು ಶಾಸಕರಿಗೆ ಮನವರಿಕೆ ಮಾಡಿಕೊಡಲು ಪಿಎಸ್ ಐ ಪ್ರಯತ್ನಿಸುತ್ತಾರೆ. ಇದು ಕಾಂಗ್ರೆಸ್ ಶಾಸಕರನ್ನು ಕೆರಳಿಸಿದೆ.

"ನೀವು ಸುಮ್ಮನಿರಿ. ನಿಮಗೆ ಏನು ಗೊತ್ತು? ನಾನು ನಿಮಗೆ ಹೇಳುತ್ತೇನೆ. ಈಗಿನ ಸರ್ಕಾರ ನಿಮಗೆ ಬೆಂಬಲ ನೀಡುತ್ತಿರಬಹುದು. ನಾನು ನಿನ್ನನ್ನು ಬಿಡುವುದಿಲ್ಲ ಎಂದು ಅವರು ಆವಾಜ್ ಹಾಕಿದ್ದಾರೆ. ಈ ವಿಡಿಯೋವನ್ನು  ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯ ರೌಡಿಗಳ ಅಡ್ಡವಾಗಲಿದೆ ಎಂದು ಟೀಕಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!