ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಇ-ವೇ ಟೋಲ್ ಸಂಗ್ರಹಕ್ಕೆ ವಿರೋಧ: ಕಾಂಗ್ರೆಸ್ ನಿಂದ ಪ್ರತಿಭಟನೆ
ಬೆಂಗಳೂರು-ಮೈಸೂರು ಹೊಸ ಎಕ್ಸ್ಪ್ರೆಸ್ವೇ ಯೋಜನೆ ಸಂಪೂರ್ಣ ಸಿದ್ಧಗೊಳ್ಳುವ ಮುನ್ನವೇ ವಾಹನ ಸವಾರರಿಂದ ಟೋಲ್ ಸಂಗ್ರಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಂಗಳೂರು-ಮೈಸೂರು ಹೊಸ ಎಕ್ಸ್ಪ್ರೆಸ್ವೇ ಯೋಜನೆ ಸಂಪೂರ್ಣ ಸಿದ್ಧಗೊಳ್ಳುವ ಮುನ್ನವೇ ವಾಹನ ಸವಾರರಿಂದ ಟೋಲ್ ಸಂಗ್ರಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.
ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್, ಇದು ಹಳೇ ಮೈಸೂರು ಭಾಗದ ಜನರಿಗೆ ಬಿಜೆಪಿ ಯುಗಾದಿ ಉಡುಗೊರೆ ಎಂದು ಟೀಕಿಸಿದರು. ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಕಾಂಗ್ರೆಸ್ ಇದರ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದಿದ್ದಾರೆ.
ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇ-ವೇ ಟೋಲ್: ಎನ್ ಹೆಚ್ಎಐ ಪ್ರತಿಕ್ರಿಯೆ ಕೇಳಿದ ಕರ್ನಾಟಕ ಹೈಕೋರ್ಟ್
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದುವರೆಗೆ ಪಕ್ಷದ ನಾಯಕರು ತಮ್ಮೊಂದಿಗೆ ಚರ್ಚಿಸಿಲ್ಲ. ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಹೇಳಿದರು. ನಾವು ಯಾರ ಬಗ್ಗೆಯೂ ಮೃದು ಧೋರಣೆ ಹೊಂದಿಲ್ಲ. ಕಾಂಗ್ರೆಸ್ ಕ್ಷೇತ್ರವನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಈ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಸಿದ್ದು, ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.