ಕರ್ನಾಟಕ ಹೈಕೋರ್ಟ್ 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇ-ವೇ ಟೋಲ್: ಎನ್ ಹೆಚ್ಎಐ ಪ್ರತಿಕ್ರಿಯೆ ಕೇಳಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಟೋಲ್ ಸಂಗ್ರಹದ ವಿಚಾರವಾಗಿ 3 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಹೆಚ್ಎಐ) ಗೆ ಸೂಚನೆ ನೀಡಿದೆ. 

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಸಂಚರಿಸುವ ಪ್ರಯಾಣಿಕರು ಪ್ರಸ್ತಾಪಿಸಿರುವ ವಿಷಯದ ಬಗ್ಗೆ ಸ್ವಯಂ ಪ್ರೇರಿತ ದೃಷ್ಟಿ ಹರಿಸಿರುವ ಹೈಕೋರ್ಟ್ ಟೋಲ್ ಸಂಗ್ರಹದ ವಿಚಾರವಾಗಿ 3 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಹೆಚ್ಎಐ) ಗೆ ಸೂಚನೆ ನೀಡಿದೆ. 

ಮುಖ್ಯ ನ್ಯಾ. ಪ್ರಸನ್ನ ವರಾಳೆ ಹಾಗೂ ನ್ಯಾ. ಅಶೋಕ್ ಎಸ್ ಕಿಣಗಿ ಅವರಿದ್ದ ಪೀಠ, ಬೆಂಗಳೂರು-ಕನಕಪುರ ನಡುವಿನ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯಲ್ಲಿ ಸುರಕ್ಷತಾ ಕ್ರಮಗಳ ಕೊರತೆಯ ಬಗ್ಗೆ 2022 ರಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುವಾಗ ಈ ಆದೇಶ ನೀಡಿದೆ.

ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿರುವ ಕೋರ್ಟ್, ಎಕ್ಸ್ ಪ್ರೆಸ್ ವೇ ನಲ್ಲಿ ಕಾಮಗಾರಿ ಪೂರ್ಣಗೊಳ್ಳುವುದಕ್ಕೂ ಮುನ್ನವೇ ಟೋಲ್ ಸಂಗ್ರಹ ಪ್ರಾರಂಭವಾಗಿರುವುದು ಹಾಗೂ ಬೂಮ್ ತಡೆಗೋಡೆಗಳ ಅಸಮರ್ಪಕ ಕಾರ್ಯನಿರ್ವಹಣೆ ಟೋಲ್ ಬೂತ್‌ಗಳಲ್ಲಿ ವಾಹನಗಳಿಗೆ ಸಣ್ಣ ಹಾನಿಯನ್ನುಂಟುಮಾಡುತ್ತದೆ ಮತ್ತು ಸ್ವಯಂಚಾಲಿತ ಫಾಸ್ಟ್‌ಟ್ಯಾಗ್ ಸ್ಕ್ಯಾನರ್‌ಗಳಲ್ಲಿನ ತಾಂತ್ರಿಕ ದೋಷಗಳು ಕಳವಳಕ್ಕೆ ಕಾರಣವಾಗಿವೆ ಎಂಬ ಅಂಶಗಳನ್ನು ಗಮನಿಸಿದೆ. ಫಾಸ್ಟ್ ಟ್ಯಾಗ್ ಸ್ಕ್ಯಾನರ್ ಗಳಲ್ಲಿನ ತಾಂತ್ರಿಕ ದೋಷದಿಂದಾಗಿ ವಾಹನಗಳು ಸರ್ವೀಸ್ ರಸ್ತೆಯನ್ನು ಬಳಕೆ ಮಾಡುವ ಅನಿವಾರ್ಯತೆ ಸೃಷ್ಟಿಸಿದ್ದು ವಿಳಂಬಕ್ಕೆ ಕಾರಣವಾಗುತ್ತಿದೆ ಎಂದು ಹೇಳಿದೆ. 

ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ನಿಯಮಗಳನ್ನು ಉಲ್ಲೇಖಿಸಿರುವ ಕೋರ್ಟ್, ಟೋಲ್ ಸಂಗ್ರಹವನ್ನು ಪ್ರಾರಂಭಿಸುವ ಮೊದಲು ಸಾರ್ವಜನಿಕ ಸೂಚನೆಯನ್ನು ನೀಡುವುದು ಸೇರಿದಂತೆ ವಿವಿಧ ಪೂರ್ವಾಪೇಕ್ಷಿತಗಳನ್ನು ನಿಯಮಗಳು ಕಡ್ಡಾಯಗೊಳಿಸುತ್ತವೆ. ಆದರೆ ಟೋಲ್ ಸಂಗ್ರಹ ಪ್ರಾರಂಭವಾಗುವ ಮೊದಲು ಇದನ್ನು ಮಾಡಲಾಗಿಲ್ಲ. ಆದ್ದರಿಂದ, ಟೋಲ್ ಸಂಗ್ರಹಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಸಾರ್ವಜನಿಕ ಹಿತಾಸಕ್ತಿಯಿಂದ ಪರಿಗಣಿಸಬೇಕು ಎಂದು ಹೇಳಿದೆ.

ಇನ್ನು ರಸ್ತೆ ವಿಸ್ತರಣೆಯ ಪಿಐಎಲ್ ಗೆ ಸಂಬಂಧಿಸಿದಂತೆ, ಅರ್ಜಿದಾರರು ಹೇಳಿರುವ ಅಂಶಗಳನ್ನು ಪರಿಶೀಲಿಸಲು ನ್ಯಾಯಾಲಯವು ವಕೀಲ ಶಿವಪ್ರಸಾದ್ ಶಾಂತನಗೌಡರನ್ನು ತನ್ನ ಆಯುಕ್ತರನ್ನಾಗಿ ನೇಮಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT