ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಾಜಿ ಪ್ರೇಯಸಿ ಮೇಲೆ ಅತ್ಯಾಚಾರವೆಸಗಿ ಕೊಲೆ; ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ!

ಮತ್ತೊಬ್ಬ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಬಳಿಕ 23 ವರ್ಷದ ತನ್ನ ಮಾಜಿ ಪ್ರೇಮಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ  ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಬೆಂಗಳೂರು: ಮತ್ತೊಬ್ಬ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಬಳಿಕ 23 ವರ್ಷದ ತನ್ನ ಮಾಜಿ ಪ್ರೇಮಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ  ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಆರೋಪಿ ಮನೋಜ್ ಕೆಪಿ ಅಗ್ರಹಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಾಗಿ ಜೀವನ್ಮರಣದ ನಡುವೆ ಹೋರಾಟ ಮಾಡುತ್ತಿದ್ದಾನೆ. ಆರೋಪಿಯನ್ನು ಮನೋಜ್ ಮತ್ತು ಸಂತ್ರಸ್ತೆ ಫೇಸ್‌ಬುಕ್ ಸ್ನೇಹಿತರಾಗಿದ್ದು, ನಂತರ ಪ್ರೀತಿಸುತ್ತಿದ್ದರು. ಸಂತ್ರಸ್ತೆಯ ಪೋಷಕರು ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯಿಸಿದ್ದಾರೆ.

ಈ ವಿಷಯ ತಿಳಿದ ಆರೋಪಿ, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆಕೆಯ ನಿವಾಸಕ್ಕೆ ತೆರಳಿ ಆಕೆಯೊಂದಿಗೆ ಜಗಳವಾಡಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿ ತಲೆದಿಂಬಿನಿಂದ  ಉಸಿರಿಗ್ಟಿಸಿ ಕೊಲೆಗೈದಿದ್ದಾನೆ ಎನ್ನಲಾಗಿದೆ. ಆಕೆಯ ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ  ಅತ್ಯಾಚಾರ ನಡೆಸಿರುವುದು ದೃಢ ಪಟ್ಟಿದೆ.

ಮನೋಜ್ ರಸ್ತೆ ನಿರ್ಮಾಣ ಕಂಪನಿಯಲ್ಲಿ ಬರಹಗಾರರಾಗಿ ಕೆಲಸ ಮಾಡುತ್ತಾನೆ. ಸಂತ್ರಸ್ತ ಯುವತಿ ವಿಲ್ಸನ್ ಗಾರ್ಡನ್ ನಿವಾಸಿ.  ಮಂಗಳವಾರ ರಾತ್ರಿ 10 ರಿಂದ 12ರ ಸಮಯದಲ್ಲಿ ಕೃತ್ಯ ನಡೆದಿದೆ, ಮನೆಗೆ ಮರಳಿದ ಬಳಿಕ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಕೊಲೆಯ ಬಗ್ಗೆ ತಿಳಿಯದ ಸಂತ್ರಸ್ತೆಯ ಮನೆಯವರು ಆಕೆ ಮಲಗಿದ್ದಾಳೆ ಎಂದು ಭಾವಿಸಿದ್ದರು, ಆದರೆ ನಂತರ ಆಕೆ ಸತ್ತಿರುವುದು ತಿಳಿದು ಬಂದಿದೆ. ದೂರು ದಾಖಲಾದ ನಂತರ, ಸ್ಥಳೀಯ ಗುಪ್ತಚರ ಆಧಾರವರದಿಗಳ ಆಧಾರದ ಮೇಲೆ ನಾವು ಆರೋಪಿಗಳ ವಿವರಗಳನ್ನು ಸಂಗ್ರಹಿಸಿದ್ದೇವೆ. ನಾವು ಅವರ ಮನೆಗೆ ಹೋದಾಗ, ಆತ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ನಮಗೆ ತಿಳಿಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆರೋಪಿ ಮನೋಜ್ ನನ್ನು ಇನ್ನೂ ಬಂಧಿಸಿಲ್ಲ. ಸಂತ್ರಸ್ತೆಯ ಮರಣೋತ್ತರ ಪರೀಕ್ಷೆ ವರದಿಯು ಅತ್ಯಾಚಾರವನ್ನು ದೃಢಪಡಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತೆ, ತನ್ನ ವಿದ್ಯಾಭ್ಯಾಸದ ನಂತರ, ಸ್ವಲ್ಪ ಕಾಲ ಕೆಲಸ ಮಾಡುತ್ತಿದ್ದಳು, ಆದರೆ ಸದ್ಯ  ಮನೆಯಲ್ಲಿಯೇ ಇದ್ದಳು. ಮನೋಜ್ ವಿರುದ್ಧ ಅತ್ಯಾಚಾರ (ಐಪಿಸಿ 376) ಮತ್ತು ಕೊಲೆ (ಐಪಿಸಿ 302) ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT