ಸಿ.ಟಿ ರವಿ 
ರಾಜ್ಯ

ಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಎಂಬುದು ಐತಿಹಾಸಿಕ ಸತ್ಯ : ಸಿ.ಟಿ ರವಿ

ಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಎಂಬುದು ಐತಿಹಾಸಿಕ ಸತ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಧಾರವಾಡ: ಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಎಂಬುದು ಐತಿಹಾಸಿಕ ಸತ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಶಾಸಕ ಸಿ..ಟಿ.ರವಿ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಟಿಪ್ಪು ಬದುಕಿದ್ದರೆ ಕೈಮಾಬಾದ್ ಎಂದು ಕರೆಯೋಕೆ ಹೆಚ್.ಡಿ.ಕೆಗೆ ಇಷ್ಟ. ಕುಮಾರಸ್ವಾಮಿಗೆ ಹಾಸನವನ್ನು ಕೈಮಾಬಾದ್ ಎಂದು ಕರೆಯೋಕೆ ಇಷ್ಟ ಎಂದಿದ್ದಾರೆ.

ರಾಜ್ಯದ 140ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದಲ್ಲಿ ರಥಯಾತ್ರೆ ಮಾಡಿದ್ದೇವೆ, ವಿಜಯಸಂಕಲ್ಪ ಯಾತ್ರೆಯಲ್ಲಿ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಬಿಜೆಪಿ ಅತಿ ಹೆಚ್ಚು ಸೀಟ್ ಗೆದ್ದು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೆ, ಕೆಲವರಿಗೆ ವೋಟ್ ಮೊದಲು ಆದರೆ ನಮಗೆ ರಾಷ್ಟ್ರ ಮೊದಲು ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.

ಅಭಿವೃದ್ಧಿಯಲ್ಲಿ ಯಾರೂ ನಮ್ಮನ್ನ ಹಿಂದೆ ಹಾಕುವುದಕ್ಕೆ ಆಗುವುದಿಲ್ಲ. ಪ್ರತಿ ಕ್ಷೇತ್ರದಲ್ಲಿ ಶೇ.70 ರಿಂದ 80 ರಷ್ಟು ಸರ್ಕಾರದ ಫಲಾನುಭವಿಗಳಿದ್ದಾರೆ. ಫಲಾನುಭವಿಗಳಷ್ಟೇ ಮತ ಹಾಕಿದ್ರೆ ಸಾಕು ಕಾಂಗ್ರೆಸ್ ಠೇವಣಿ ಕಳೆದುಕೊಳ್ಳುತ್ತದೆ ಎಂದಿದ್ದಾರೆ.

‘ನಾವು ಸರ್ಕಾರದ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಜನರ ಮುಂದೆ ಇಟ್ಟಿದ್ದೇವೆ. ಜೊತೆಗೆ ಪಕ್ಷದ ಸಿದ್ಧಾಂತ ಮತ್ತು ಬದ್ಧತೆ ಮುಂದಿಟ್ಟು ಬಹುಮತ ಕೇಳ್ತಿದ್ದೇವೆ. ನಾವು ಯಾವುದೇ ಜಾತಿ ತಾರತಮ್ಯ ಮಾಡದೆ ಯೋಜನೆ ತಲುಪಿಸಿದ್ದೇವೆ. ಯಾವತ್ತೋ ಸಾಲ ಮನ್ನಾ ಮಾಡಿರೋದನ್ನೆ ಇಂದಿಗೂ ಕೆಲವರು ಹೇಳುತ್ತಿದ್ದಾರೆ ಎಂದು ಸಿಟಿ ರವಿ ಪರೋಕ್ಷವಾಗಿ ಕಾಂಗ್ರೆಸ್​ ವಿರುದ್ದ ವ್ಯಂಗ್ಯವಾಡಿದ್ದಾರೆ. ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ತಗೆದಿಟ್ಟಿದ್ದೇವೆ. ಒಂದು ಕಾಲದಲ್ಲಿ ನಾವು ಕಳಸಾ ಬಂಡೂರಿಗಾಗಿ ಹೋರಾಟ ಮಾಡಿದ್ವಿ. ಅಧಿಕಾರಕ್ಕೆ ಬಂದ ಮೇಲೆ ಸುಮ್ಮನೆ ಕೂರಲಿಲ್ಲ. ನಮ್ಮ ಬದ್ದತೆ ತೋರಿಸಿ DPR ಗೆ ಅನುಮತಿ ತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT