ಸಂಗ್ರಹ ಚಿತ್ರ 
ರಾಜ್ಯ

ಖಾತೆದಾರರ ಮಾಹಿತಿ ಒದಗಿಸುವುದು ಟ್ವಿಟ್ಟರ್ ಕರ್ತವ್ಯವಾಗಿದೆ: ಹೈಕೋರ್ಟ್'ಗೆ ಕೇಂದ್ರ ಸರ್ಕಾರ

ನಿಯಮಗಳ ಪ್ರಕಾರ ಭಾರತದ ಸಮಗ್ರತೆ ಮತ್ತು ಸಾರ್ವಭೌಮತ್ವ ಅಥವಾ ಸಾರ್ವಜನಿಕ ಆದೇಶದ ಮೇಲೆ ಯಾವುದೇ ಟ್ವೀಟ್ ಗಳು ಪರಿಣಾಮ ಬೀರಿದಾಗ ಆ ಖಾತೆದಾರರ ಮಾಹಿತಿ ಒದಗಿಸಲು ಟ್ವಿಟರ್ ಬದ್ಧವಾಗಿರಬೇಕು. ಒಂದು ವೇಳೆ ನಿಯಮ ಮೀರಿದರೆ ಇದರ ವಿರುದ್ಧ ಕ್ರಮ ಕೈಗೊಳ್ಳಲು ಅಥವಾ ನೋಟಿಸ್ ಜಾರಿಗೊಳಿಸುವ ಅಧಿಕಾರ ಸರ್ಕಾರಕ್ಕೆ ಇರುತ್ತದೆ...

ಬೆಂಗಳೂರು: ನಿಯಮಗಳ ಪ್ರಕಾರ ಭಾರತದ ಸಮಗ್ರತೆ ಮತ್ತು ಸಾರ್ವಭೌಮತ್ವ ಅಥವಾ ಸಾರ್ವಜನಿಕ ಆದೇಶದ ಮೇಲೆ ಯಾವುದೇ ಟ್ವೀಟ್ ಗಳು ಪರಿಣಾಮ ಬೀರಿದಾಗ ಆ ಖಾತೆದಾರರ ಮಾಹಿತಿ ಒದಗಿಸಲು ಟ್ವಿಟರ್ ಬದ್ಧವಾಗಿರಬೇಕು. ಒಂದು ವೇಳೆ ನಿಯಮ ಮೀರಿದರೆ ಇದರ ವಿರುದ್ಧ ಕ್ರಮ ಕೈಗೊಳ್ಳಲು ಅಥವಾ ನೋಟಿಸ್ ಜಾರಿಗೊಳಿಸುವ ಅಧಿಕಾರ ಸರ್ಕಾರಕ್ಕೆ ಇರುತ್ತದೆ ಎಂದು ಹೈಕೋರ್ಟ್'ಗೆ ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ವ್ಯಕ್ತಿಗತವಾಗಿ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಜಾರಿ ಮಾಡಿರುವ ನಿರ್ಬಂಧ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಆರ್‌ ಶಂಕರನಾರಾಯಣನ್‌ ಅವರು “ಟ್ವಿಟರ್‌ ವಿದೇಶಿ ಕಾರ್ಪೊರೇಟ್‌ ಸಂಸ್ಥೆಯಾಗಿರುವುದರಿಂದ ಸಂವಿಧಾನದ 19ನೇ ವಿಧಿಯಡಿ ಪರಿಹಾರ ಪಡೆಯಲು ಅರ್ಹವಾಗಿಲ್ಲ. 14ನೇ ವಿಧಿಯಡಿ ಯಾವುದೇ ಸ್ವೇಚ್ಛಾಚಾರ ನಡೆದಿಲ್ಲ ಮತ್ತು ಐಟಿ ನಿಯಮ 69 (ಎ) ಅನ್ನು ಸೂಕ್ತವಾದ ರೀತಿಯಲ್ಲಿ ಪಾಲಿಸಲಾಗಿದೆ. ಟ್ವಿಟರ್‌ ಖಾತೆ ಹೊಂದಿರುವವರಿಗೆ ನೋಟಿಸ್‌ ನೀಡದಿರುವುದು ಇಡೀ ಪ್ರಕ್ರಿಯೆಯನ್ನು ದುರ್ಬಲಗೊಳಿಸುವುದಿಲ್ಲ. ಹೀಗಾಗಿ, ಯಾವುದೇ ರೀತಿಯ ಪರಿಹಾರ ಪಡೆಯಲು ಟ್ವಿಟರ್‌ ಅರ್ಹವಾಗಿಲ್ಲ” ಎಂದರು.

“ಐಟಿ ನಿಯಮ 2021ರ ಅಡಿ ಟ್ವಿಟರ್‌ ಪ್ರಮುಖ ಸಾಮಾಜಿಕ ಮಧ್ಯಸ್ಥಿಕೆ ಮಾಧ್ಯಮವಾಗಿದ್ದು, ನಿಯಮ 4ರ ಪ್ರಕಾರ ಹೆಚ್ಚುವರಿ ಕಾರ್ಯತತ್ಪರತೆ ತೋರಬೇಕಿದೆ. “ಖಾತೆದಾರರ ಮಾಹಿತಿ ಒದಗಿಸುವುದು ಮಧ್ಯಸ್ಥಿಕೆದಾರರ ಕರ್ತವ್ಯವಾಗಿದೆ. ಸರ್ಕಾರದ ನೋಟಿಸ್‌ಗಳಿಗೆ ಟ್ವಿಟರ್‌ ಪ್ರತಿಕ್ರಿಯಿಸಿಲ್ಲ. ಈ ಮಧ್ಯೆ, ದುಷ್ಕರ್ಮಿಗಳು ಪ್ರಚೋದನಾಕಾರಿ ಮಾಹಿತಿ ಹಾಕುವುದನ್ನು ಮುಂದುವರಿಸಿದ್ದಾರೆ” ಎಂದು ವಾದಿಸಿದರು.

“ಭಾರತ ಆಕ್ರಮಿತ ಕಾಶ್ಮೀರದ ಕುರಿತು ಯಾರೋ ಒಬ್ಬರು ಊಹಾತ್ಮಕವಾದ ಪಾಕಿಸ್ತಾನ ಸರ್ಕಾರದ ಹೆಸರಿನಲ್ಲಿ ಟ್ವೀಟ್‌ ಮಾಡುತ್ತಾರೆ. ಮತ್ತಾರೋ ಪ್ರಭಾಕರ್‌ ಹೀರೊ (ಹತರಾದ ಎಲ್‌ಟಿಟಿಇ ಮುಖಂಡ), ಅವರು ಮರಳಿ ಬರುತ್ತಿದ್ದಾರೆ ಎನ್ನುತ್ತಾರೆ. ಇದೆಲ್ಲವೂ ಅಪಾಯಕಾರಿಯಾಗಿದ್ದು, ಗಲಭೆ ಸೃಷ್ಟಿಸಬಹುದು. ಇದರ ಮೇಲೆ ನಿಗಾ ಇಡುವುದು ಸರ್ಕಾರಕ್ಕೆ ಕಷ್ಟವಾಗಿದ್ದು, ಅದಕ್ಕೆ ಬೆಂಬಲಬೇಕಿದೆ” ಎಂದು ವಾದ ಪೂರ್ಣಗೊಳಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಏಪ್ರಿಲ್‌ 10ಕ್ಕೆ ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT