ಕಂದಾಯ ಸಚಿವ ಆರ್.ಅಶೋಕ್ 
ರಾಜ್ಯ

ಉರಿಗೌಡ, ನಂಜೇಗೌಡ ಕುರಿತು ಇತಿಹಾಸ ಮರು ಪರಿಶೀಲನೆ- ಸಚಿವ ಆರ್. ಅಶೋಕ್

ಉರಿಗೌಡ ಹಾಗೂ ನಂಜೇಗೌಡ ಅವರದು ನೈಜ ಇತಿಹಾಸವೇ ಅಥವಾ ಕಾಲ್ಪನಿಕವೇ ಎಂಬುದನ್ನು ಮರು ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಚಿತ್ರದುರ್ಗ: ಇತ್ತೀಚಿಗೆ ಸಾರ್ವಜನಿಕ ಹಾಗೂ ರಾಜಕೀಯವಾಗಿ ಉರಿಗೌಡ- ನಂಜೇಗೌಡ ಕುರಿತು ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಇಬ್ಬರು ನಾಯಕರು ಟಿಪ್ಪು ಸುಲ್ತಾನ್ ಹತ್ಯೆ ಮಾಡಿದ ಒಕ್ಕಲಿಗ ನಾಯಕರೆಂದು ಆಡಳಿತಾರೂಢ ಬಿಜೆಪಿ ನಾಯಕರು ಬಿಂಬಿಸುತ್ತಿದ್ದರೆ, ಇವರು ಕಾಲ್ಪನಿಕ ವ್ಯಕ್ತಿಗಳು ಎಂಬುದು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ವಾದವಾಗಿದೆ. ಈ ವಿಚಾರದಲ್ಲಿ ಮೂರು ಪ್ರಮುಖ ರಾಜಕೀಯ ಪಕ್ಷಗಳ ನಡುವೆ ವಾಕ್ ಸಮರ ಮುಂದುವರೆದಿದೆ.

ಈ ಮಧ್ಯೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯಲ್ಲಿಂದು ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್,  ಉರಿಗೌಡ ಹಾಗೂ ನಂಜೇಗೌಡ ಅವರದು ನೈಜ ಇತಿಹಾಸವೇ ಅಥವಾ ಕಾಲ್ಪನಿಕವೇ ಎಂಬುದನ್ನು ಮರು ಪರಿಶೀಲಿಸಲಾಗುವುದು ಎಂದಿದ್ದಾರೆ.

ಇತಿಹಾಸವನ್ನು ತಿರುಚಲು ಯಾರಿಂದಲೂ ಸಾಧ್ಯವಿಲ್ಲ, ಇತಿಹಾಸ ಮತ್ತು ಸತ್ಯವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಯಾವುದೇ ಸಮುದಾಯವನ್ನು ಅವಹೇಳನ ಮಾಡುವ ಉದ್ದೇಶ ಬಿಜೆಪಿಗೆ ಇಲ್ಲ. ಚುನಾವಣಾ ಸಂದರ್ಭದಲ್ಲಿ ಜಾತಿ ರಾಜಕೀಯ ಮಾಡುವುದನ್ನು ಜೆಡಿಎಸ್ ಬಿಡಬೇಕು. ಉರಿಗೌಡ ಮತ್ತು ನಂಜೇಗೌಡ ವಿಚಾರ ಬಿಟ್ಟು ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆ ನಡೆಯಲಿ ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 20 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು