ನೂತನ ಮಹದೇಶ್ವರ ಪ್ರತಿಮೆ 
ರಾಜ್ಯ

ಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆ: ಸಿಎಂ ಬೊಮ್ಮಾಯಿ ಅನಾವರಣ

ಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಿರುವ ನೂತನ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಅವರು ಬೆಳ್ಳಿ ರಥ  ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಿರುವ ನೂತನ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಅವರು ಬೆಳ್ಳಿ ರಥ  ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಚಾಮರಾಜನಗರ ಜಿಲ್ಲೆ ಧಾರ್ಮಿಕ ಹಾಗೂ ಜನಪದೀಯವಾಗಿ ಸಮೃದ್ಧವಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಾದ ಸಹಕಾರ ನೀಡಲಾಗುವುದು, ರೈತರಿಗೆ ಅರಿಶಿನಕ್ಕೆ ಶೀಘ್ರದಲ್ಲಿಯೇ ಬೆಂಬಲ ಬೆಲೆ ನೀಡಲಾಗುವುದು,  ಚಂಗಡಿ ಗ್ರಾಮ ಸ್ಥಳಾಂತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. 

ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಎನ್, ಮಹೇಶ್ ಹಾಗೂ ವಿವಿಧ ಮಠಾಧೀಶರು ಸಮಾರಂಭದಲ್ಲಿ ಉಪಸ್ಥಿತರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!