ಬೆಂಗಳೂರು ಗ್ಯಾಸ್ ಪೈಪ್ ಲೈನ್ 
ರಾಜ್ಯ

ಬೆಂಗಳೂರು: 3 ದಿನಕ್ಕೊಮ್ಮೆ ಗ್ಯಾಸ್ ಪೈಪ್ ಲೈನ್ ಸೋರಿಕೆ; ಗೇಲ್ ಸಂಸ್ಥೆ ಹೇಳಿಕೆ

ಇತ್ತೀಚೆಗೆ ನಗರದಲ್ಲಿ ಪದೇ ಪದೇ ಗ್ಯಾಸ್ ಪೈಪ್ ಲೈನ್ ಸೋರಿಕೆ ಮತ್ತು ಸ್ಫೋಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೇಲ್ ಸಂಸ್ಥೆ ಪ್ರತಿ 3 ದಿನಗಳಿಗೊಮ್ಮೆ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗುತ್ತಿದೆ ಎಂದು ಹೇಳಿದೆ.

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಪದೇ ಪದೇ ಗ್ಯಾಸ್ ಪೈಪ್ ಲೈನ್ ಸೋರಿಕೆ ಮತ್ತು ಸ್ಫೋಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೇಲ್ ಸಂಸ್ಥೆ ಪ್ರತಿ 3 ದಿನಗಳಿಗೊಮ್ಮೆ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗುತ್ತಿದೆ ಎಂದು ಹೇಳಿದೆ.

ಗ್ಯಾಸ್ ಸೋರಿಕೆಯಾದ ಪರಿಣಾಮ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುರಿತು ಪ್ರತಿಕ್ರಿಯಿಸಿದ ಗೇಲ್ ಕಂಪನಿಯು, 'ನಗರದಲ್ಲಿ ಪ್ರತಿ 3 ದಿನಗಳಿಗೊಮ್ಮೆ 1 ಗ್ಯಾಸ್ ಪೈಪ್‌ಲೈನ್ ಸೋರಿಕೆಯಾಗುತ್ತಿದೆ ಎಂಬ ಮಾಹಿತಿಯನ್ನು ಗೇಲ್ ಬಹಿರಂಗಪಡಿಸಿದೆ. 

ಗೇಲ್ ಉಪ ಪ್ರಧಾನ ವ್ಯವಸ್ಥಾಪಕ, ಕಾರ್ಯಾಚರಣೆ ಮತ್ತು ನಿರ್ವಹಣೆ ಅಧಿಕಾರಿ ರವಿಕುಮಾರ್ ರೆಬ್ಬಾ ಈ ಕುರಿತು ಕುರಿತು ಮಾಹಿತಿ ನೀಡಿದ್ದು, ಹೆಚ್‌ಎಸ್‌ಆರ್ ಲೇಔಟ್‌ನ ಮನೆಗಳಲ್ಲಿ ಸಂಭವಿಸಿದ ಸ್ಫೋಟಕಕ್ಕೆ ಸಂಬಂಧಿಸಿದಂತೆ, ಮನೆಗಳಿಗೆ ಶೌಚಾಲಯಕ್ಕೆ ಒಳಚರಂಡಿ ಮೂಲಕ ಅನಿಲ ಪ್ರವೇಶಿಸಿದೆ. ಇದರಿಂದ ದುರಂತ ಸಂಭವಿಸಿದೆ. ಇದು ನಗರದಲ್ಲಿ ಎರಡನೇ ಪ್ರಕರಣವಾಗಿದ್ದು, ಮೊದಲ ಘಟನೆ 2018 ರಲ್ಲಿ ಸಿಂಗಸಂದ್ರದಲ್ಲಿ ನಡೆದಿತ್ತು ಎಂದರು. 

2016ರಲ್ಲಿ ಬೆಂಗಳೂರಿನಲ್ಲಿ ಪಿಎನ್‌ಜಿ ಪೂರೈಕೆ ಪ್ರಾರಂಭವಾಗಿದೆ. ದುರಂತಗಳನ್ನು ತಡೆಗಟ್ಟಲು ಸೋರಿಕೆಯನ್ನು ತ್ವರಿತವಾಗಿ ಸರಿಪಡಿಸಲಾಗಿದೆ. ಇದು ನಿಜವಾಗಿಯೂ ಸುರಕ್ಷತೆಯ ಕಾಳಜಿಯಾಗಿದೆ. ಜಲಮಂಡಳಿ ಅಥವಾ ಬೆಸ್ಕಾಂಗಳು ಅನುಮತಿಯನ್ನು ಪಡೆಯದೆ ದುರಸ್ತಿ ಕಾರ್ಯಗಳನ್ನು ಕೈಗೊಂಡಿದ್ದಕ್ಕೆ ಹಾನಿಯುಂಟಾಗುತ್ತಿದೆ. ಗೇಲ್ ಬಿಡ್ಲೂಎಸ್‌ಎಸ್‌ಬಿ ಮತ್ತು ಬೆಸ್ಕಾಂಗೆ ಕಾರ್ಯಾಚರಣೆಯ ವಿಧಾನವನ್ನು ಕಳುಹಿಸಿದೆ. ಅವರು ಕೆಲಸವನ್ನು ಪ್ರಾರಂಭಿಸುವ ಮೊದಲು ಕಂಪನಿಯ ಅನುಮತಿಯನ್ನು ತೆಗೆದುಕೊಳ್ಳಬೇಕು. ದಕ್ಷಿಣ ಬೆಂಗಳೂರು 1600 ಕಿಮೀ ವ್ಯಾಪಿಸಿರುವ ಪಿಎನ್ ಜಿ ಪೈಪ್‌ಲೈನ್‌ಗಳನ್ನು ಹೊಂದಿದೆ. ಪೈಪ್‌ಲೈನ್‌ನಿಂದ ಅನಿಲ ಸೋರಿಕೆ ಆರಂಭವಾದಾಗ ಅಧಿಕಾರಿಗಳ ಗಮನಕ್ಕೆ ತರುವ ಬದಲು ಕಾರ್ಮಿಕರು ಹಾನಿಗೊಳಗಾದ ಭಾಗದ ಮೇಲೆ ಮಣ್ಣು ಮುಚ್ಚಿದರು. ಆದರೆ ಇದರಿಂದ ಸೋರಿಕೆ ತಡೆಯಲು ಸಾಧ್ಯವಾಗಲಿಲ್ಲ, ಹೀಗಾಗಿ ಕೆಲಸದ ಸ್ಥಳದ ಸಮೀಪವಿರುವ ಮನೆಯ ಅಡುಗೆಮನೆಗೆ ಅನಿಲ ಹರಡಿತು ಎಂದರು. 

ಬೆಂಗಳೂರಿನಂತಹ ನಗರದಲ್ಲಿ ಹಾನಿ ಸಂಭವಿಸುತ್ತಲೇ ಇದೆ ಅದನ್ನು ಸರಿಪಡಿಸಲು ಗೇಲ್ ಸಾಕಷ್ಟು ಸಮರ್ಥವಾಗಿದೆ. ಆದಾಗ್ಯೂ, ಅನಿಲ ಸೋರಿಕೆಯ ಬಗ್ಗೆ ಗೇಲ್‌ಗೆ ತಿಳಿಸಲು ವಿಫಲವಾದ ಬಿಡ್ಲೂಎಸ್‌ಎಸ್‌ಬಿಯ ಅಜ್ಞಾನವೇ ದುರಂತಕ್ಕೆ ಕಾರಣವಾಯಿತು ಎಂದ ಅವರು, ನಗರದಲ್ಲಿ ಪ್ರತಿ 3 ದಿನಗಳಿಗೊಮ್ಮೆ 1 ಗ್ಯಾಸ್ ಪೈಪ್‌ಲೈನ್ ಸೋರಿಕೆಯಾಗುತ್ತಿದೆ ಎಂದು ವಿವರಿಸಿದರು.

ಏನಿದು ಪ್ರಕರಣ?
ಗ್ಯಾಸ್ಪೈಪ್‌ಲೈನ್‌ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಚ್.ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಗುರುವಾರ (ಮಾ.16) ರಂದು ಬೆಳಿಗ್ಗೆ 9.30ರ ಸುಮಾರಿಗೆ ಇಬ್ಬರು ಅಡುಗೆ ಮಾಡಲು ಬೆಂಕಿ ಹಚ್ಚಿದಾಗ ಎರಡೂ ಮನೆಯೊಳಗೆ ಏಕಾಏಕಿ ದೊಡ್ಡ ಸ್ಪೋಟ ಸಂಭಿಸಿದೆ. ಇದರಿಂದ ಹೆಚ್‌ಎಸ್‌ಆರ್ ಲೇಔಟ್‌ನ 2ನೇ ಹಂತದ 23ನೇ ಕ್ರಾಸ್ ನಿವಾಸಿಗಳಾದ ಲೈಕಾ ಅಂಜುಂ (46) ಮತ್ತು ಮುಬಾಶಿರಾ (40) ಗಾಯಗೊಂಡವರು. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿನ ಮದೀನ ಮಸೀದಿ ಬೆಂಗಳೂರು ಜಲಮಂಡಳಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ರಸ್ತೆ ಅಗೆಯಲಾಗಿದೆ. ಈ ವೇಳೆ ಗೇಲ್‌ನ ಗ್ಯಾಸ್ ಪೈಪ್ ಲೈನ್‌ಗೆ ಹಾನಿಯಾಗಿ ಗ್ಯಾಸ್ ಸೋರಿಕೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT