ರಾಜ್ಯ

ಭಾರತ ಆಯ್ದ ಎರಡು-ಮೂರು ಮಂದಿಗೆ ಸೇರಿದ್ದಲ್ಲ, ಎಲ್ಲರಿಗೂ ಸೇರಿದ್ದು: ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

ಬೆಳಗಾವಿ: ಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. 

ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ 'ಯುವ ಕ್ರಾಂತಿ' ಸಮಾವೇಶದಲ್ಲಿ ಮಾತನಾಡಿದ ಅವರು, 'ಭಾರತ ಅದಾನಿಯವರದ್ದಲ್ಲ. ಬದಲಿಗೆ ರೈತರ, ಯುವಕರ ಭಾರತ. ದೇಶದಲ್ಲಿಂದು ದ್ವೇಷವನ್ನು ಬಿತ್ತಲಾಗುತ್ತಿದೆ. ರಾಜ್ಯ ಸರ್ಕಾರ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ. ರಾಜ್ಯದಲ್ಲಿ ಗುತ್ತಿಗೆದಾರರ ಬಳಿ ಶೇ 40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಕ್ರಮಕೈಗೊಂಡಿಲ್ಲ ಎಂದರು.

ಪದವೀಧರರಿಗೆ 3000 ರೂ., ಡಿಪ್ಲೊಮಾ ಹೊಂದಿರುವವರಿಗೆ 2 ವರ್ಷಕ್ಕೆ 1500 ರೂ. ಮಾಸಿಕ ನಿರುದ್ಯೋಗ ಭತ್ಯೆ ನೀಡಲಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಇದು ಸಾಧ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕರ್ನಾಟಕದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ರಾಹುಲ್ ಹೇಳಿದರು.

ಭಾರತ್ ಜೋಡೋ ಯಾತ್ರೆಯ ವೇಳೆ ಇಲ್ಲಿನ ಯುವಕರು ಇಲ್ಲಿ ಉದ್ಯೋಗ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಈ ಸರ್ಕಾರ ಶೇ 40 ಕಮಿಷನ್ ಸರ್ಕಾರ ಎಂದು ಜನರು ದೂರಿದ್ದಾರೆ. ಎಲ್ಲಾ ಕಾಂಗ್ರೆಸ್ ನಾಯಕರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲಿದ್ದಾರೆ. ಈ ಚುನಾವಣೆಯಲ್ಲಿ ಪಕ್ಷವು ಜಯಭೇರಿ ಬಾರಿಸಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel