ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ 5 ನಗರಗಳಿಗೆ ಕೆಎಸ್‌ಆರ್‌ಟಿಸಿ ಇ-ಬಸ್ ಸೇವೆ ವಿಸ್ತರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೊಸದಾಗಿ ಬೆಂಗಳೂರಿನಿಂದ ರಾಜ್ಯದ ಐದು ನಗರಗಳಿಗೆ ಇವಿ ಪವರ್‌ ಪ್ಲಸ್‌ ಎಂಬ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನ ಆರಂಭಿಸಿದೆ. ಈ ಮೂಲಕ ಬೆಂಗಳೂರು-ಮೈಸೂರು ಮಾತ್ರವಲ್ಲದೇ ರಾಜ್ಯದ ಇತರೆ ನಗರಗಳ ಪ್ರಯಾಣಿಕರು ಕೂಡಾ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನು ಪಡೆಯಬಹುದಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೊಸದಾಗಿ ಬೆಂಗಳೂರಿನಿಂದ ರಾಜ್ಯದ ಐದು ನಗರಗಳಿಗೆ ಇವಿ ಪವರ್‌ ಪ್ಲಸ್‌ ಎಂಬ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನ ಆರಂಭಿಸಿದೆ. ಈ ಮೂಲಕ ಬೆಂಗಳೂರು-ಮೈಸೂರು ಮಾತ್ರವಲ್ಲದೇ ರಾಜ್ಯದ ಇತರೆ ನಗರಗಳ ಪ್ರಯಾಣಿಕರು ಕೂಡಾ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನು ಪಡೆಯಬಹುದಾಗಿದೆ.

ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್​ಆರ್​ಟಿಸಿ) ಅಂತರ್ ನಗರ ನೂತನ ಹವಾ ನಿಯಂತ್ರಿತ ಎಲೆಕ್ಟ್ರಿಕ್ ಚಾಲಿತ ಇ.ವಿ. ಪವರ್ ಪ್ಲಸ್ ಬಸ್ ಗಳಿಗೆ ಚಾಲನೆ ನೀಡಿದರು.

ವಿಧಾನಸೌಧದ ಮುಂದೆ ನಡೆದ ಸರಳ ಕಾರ್ಯಕ್ರಮದಲ್ಲಿ ಹವಾನಿಯಂತ್ರಿತ 50 ಇವಿ ಪವರ್ ಪ್ಲಸ್ ಎಲೆಕ್ಟ್ರಿಕ್ ಬಸ್ ಗಳಲ್ಲಿ ಮೊದಲ ಹಂತವಾಗಿ 25 ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಿದರು.

ಕೆಎಸ್‌ಆರ್‌ಟಿಸಿ ಎಂಡಿ ಅನ್ಬು ಕುಮಾರ್ ಅವರು ಮಾತನಾಡಿ, ಬೆಂಗಳೂರು-ಮೈಸೂರು ಇ-ಬಸ್‌ಗೆ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದು ನಮಗೆ ಪ್ರೇರಣೆ ನೀಡಿದೆ. ಬೆಂಗಳೂರು-ಮೈಸೂರು ಮಾರ್ಗದ ಯಶಸ್ಸಿನ ನಂತರ, ನಾವು ಐದು ಅಂತರ್-ಜಿಲ್ಲಾ ಮಾರ್ಗಗಳಲ್ಲಿ ಇ ಬಸ್ ಸೇವೆ ವಿಸ್ತರಿಸಲು ಮುಂದಾಗಿದ್ದೇವೆ. 25 ಬಸ್ ಗಳು ಈಗಾಗಲೇ ಆಗಮಿಸಿದ್ದು, ಏಪ್ರಿಲ್ ವೇಳೆಗೆ ಸಂಪೂರ್ಣವಾಗಿ 50 ಇ-ಬಸ್‌ಗಳನ್ನು ಕಾರ್ಯಾಚರಣೆ ನಡೆಸುತ್ತವೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರತಿ ದಿನ 7400 ಅನುಸೂಚಿಗಳಿಂದ 27 ಲಕ್ಷ ಕಿ.ಮೀ ಕ್ರಮಿಸುವುದರ ಮೂಲಕ 26 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಒದಗಿಸುತ್ತಿದ್ದು, ಇದರಲ್ಲಿ ಶೇ.17 ರಷ್ಟು ವಿದ್ಯಾರ್ಥಿಗಳಿಗೆ ಸಾರಿಗೆ ಸೇವೆಯನ್ನು ಕಲ್ಪಿಸಲಾಗುತ್ತಿದೆ. ನಿಗಮವು ಪ್ರತಿ ದಿನ ರೂ.9.5 ಕೋಟಿ ಆದಾಯ ಗಳಿಸುತ್ತಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮವು ಭಾರತ ಸರ್ಕಾರದ ಮೇಕ್ ಇನ್ ಇಂಡಿಯಾ ವಿದ್ಯುತ್ ಬಸ್ ಫೇಮ್-2 ಯೋಜನೆಯಡಿಲ್ಲಿ 50 ಅಂತರ ನಗರ ಹವಾ ನಿಯಂತ್ರಿತ ವಿದ್ಯುತ್ ಚಾಲಿತ ಬಸ್ ಗಳನ್ನು ಕಾರ್ಯಾಚರಣೆಗೊಳಿಸಲು ಯೋಜಿಸಿದ್ದು, ನಿನ್ನೆ 25 ಬಸ್ ಗಳನ್ನು ರಸ್ತೆಗೆ ಇಳಿಸಲಾಗಿದೆ. ಉಳಿದ ಬಸ್ ಗಳನ್ನು ಮುಂದಿನ ದಿನಗಳಲ್ಲಿ ರಸ್ತೆಗೆ ಬಿಡಲಾಗುತ್ತದೆ.

ಪ್ರಸ್ತುತ ಉದ್ಘಾಟನೆಗೊಂಡಿರುವ ಬಸ್​ಗಳು ಆರು ಜಿಲ್ಲೆಗಳಲ್ಲಿ ಸಂಚರಿಸುತ್ತವೆ. ಬೆಂಗಳೂರು-ಮೈಸೂರು, ಬೆಂಗಳೂರು-ಮಡಿಕೇರಿ, ಬೆಂಗಳೂರು-ವಿರಾಜಪೇಟೆ, ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ, ಬೆಂಗಳೂರು-ಚಿಕ್ಕಮಗಳೂರು.

ವಿದ್ಯುತ್ ವಾಹನಗಳ ಚಾರ್ಚಿಂಗ್ ಕೇಂದ್ರವನ್ನು ಈಗಾಗಲೇ ಬೆಂಗಳೂರು ಮತ್ತು ಮೈಸೂರಿನಲ್ಲಿ ಸ್ಥಾಪಿಸಲಾಗಿದ್ದು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗು ಚಿಕ್ಕಮಗಳೂರು ನಗರಗಳಲ್ಲಿ ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ.

ಇವಿ ಪವರ್ ಪ್ಲಸ್ ಬಸ್ ಗಳು ಬಸ್ ಗಳು 12 ಮೀಟರ್ ಉದ್ದವಾಗಿದ್ದು, ಪ್ರತಿ ಚಾರ್ಜ್ ಗೆ 300 ಕಿ.ಮೀ ಕ್ರಮಿಸುತ್ತದೆ. ಸುಧಾರಿತ Li-ion phosphate Battery ಹೊಂದಿದೆ. ಇದು 203 ಗಂಟೆಗಳಲ್ಲಿ ಫಾಸ್ಟ್ ಚಾರ್ಚಿಂಗ್ ಮೂಲಕ ಸಂಪೂರ್ಣವಾಗಿ ರೀಚಾರ್ಜ್ ಮಾಡಬಹುದು. ಚಾಲಕರು, ನಿರ್ವಾಹಕರು ಸೇರಿದಂತೆ 45 ಆಸನಗಳನ್ನು ಹೊಂದಿದೆ. ಬಸ್ ನಲ್ಲಿ ಸಿಸಿ ಕ್ಯಾಮೆರಾಗಳು, ಅಗ್ನಿಶಾಮಕ ಸಾಧನ, ಎಮರ್ಜೆನ್ಸಿ ಬಟನ್, ಪ್ರಥಮ ಚಿಕಿತ್ಸಾ ಕಿಟ್, ಗ್ಲಾಸ್ ಹ್ಯಾಮರ್ ಮತ್ತಿತರ ಸುರಕ್ಷಿತ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT