ಪಿಎಂ ನರೇಂದ್ರ ಮೋದಿ 
ರಾಜ್ಯ

ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ಬೆಂಗಳೂರು: ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ಮಾರ್ಚ್ 25 ರಂದು ಬೆಳಿಗ್ಗೆ ನಗರದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಧಾನಿ, ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲು ಹೆಲಿಕಾಪ್ಟರ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ ಎಂದು ಸರ್ಕಾರದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಮತ್ತು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಮೋದಿ ಮಧ್ಯಾಹ್ನ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ನಂತರ ಅವರು ದಾವಣಗೆರೆಗೆ ತೆರಳಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ದೆಹಲಿಗೆ ಹಾರುವ ಮುನ್ನ ಶಿವಮೊಗ್ಗಕ್ಕೆ ತೆರಳಲಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಈ ವರ್ಷ ಕರ್ನಾಟಕಕ್ಕೆ ಮೋದಿ ಅವರ ಏಳನೇ ಭೇಟಿ ಇದಾಗಿದೆ. ಮಾರ್ಚ್ 12 ರಂದು ಮಂಡ್ಯದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮತ್ತು ಧಾರವಾಡದಲ್ಲಿ ಐಐಟಿ ಕ್ಯಾಂಪಸ್ ಉದ್ಘಾಟನೆಗೆ ಪ್ರಧಾನಿ ಕರ್ನಾಟಕಕ್ಕೆ ಬಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

ಶೋಪಿಯಾನ್‌ನಲ್ಲಿ ಮುಂದುವರಿದ ಕಾರ್ಯಾಚರಣೆ: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!

ಹಾರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಇರಾನ್ ಹೊಸ ಶುಲ್ಕ: ಮಿತ್ರ ರಾಷ್ಟ್ರಗಳಿಗೆ ಮಾತ್ರ ವಿಶೇಷ ಸೌಲಭ್ಯ..!