ರಾಜ್ಯ

ಯುಗಾದಿ ಸಂಭ್ರಮ: ನಾಡಿನ ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಶುಭಾಶಯ

Manjula VN

ನವದೆಹಲಿ/ಬೆಂಗಳೂರು: ಶೋಭಾಕೃತ್ ನಾಮ ಸಂವತ್ಸರವು ಪ್ರಾರಂಭವಾಗಿರುವ ಇಂದಿನ ಯುಗಾದಿ ಹಬ್ಬವನ್ನು ದೇಶಾದ್ಯಂತ ಜನತೆ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಯುಗಾದಿ ಹಬ್ಬದ ಶುಭಾಶಯಗಳು. ಭರವಸೆ ಮತ್ತು ಹೊಸ ಆರಂಬಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಶೋಭಾಕೃತ್ ನಾಮ ಸಂವತ್ಸರವು ನಿಮ್ಮೆಲ್ಲರ ಬಾಳಿನಲ್ಲಿ ಹೊಸ ಭರವಸೆಯನ್ನು ನೀಡಿ, ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ಮೂಡಿಸಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟ್ವೀಟ್ ಮಾಡಿ, ಎಲ್ಲಾ ದೇಶವಾಸಿಗಳಿಗೆ ಚೈತ್ರ ಶುಕ್ಲಾದಿ, ಯುಗಾದಿ, ಗುಡಿ-ಪಡ್ವಾ, ಚೇತಿ-ಚಾಂದ್, ನವ್ರೆಹ್ ಮತ್ತು ಸಜಿಬು-ಚೆರೋಬಾದ ಶುಭಾಶಯಗಳನ್ನು ಕೋರುತ್ತೇನೆ. ಹೊಸ ವರ್ಷದ ಆಗಮನದಂದು ಆಚರಿಸಲಾಗುವ ಈ ವಿವಿಧ ಹಬ್ಬಗಳು ನಮ್ಮ ಸಂಸ್ಕೃತಿಯ ವಾಹಕಗಳಾಗಿವೆ. ಈ ಪವಿತ್ರ ಹಬ್ಬಗಳ ಸಂದರ್ಭದಲ್ಲಿ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ಬಯಸುತ್ತೇನೆಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ಈ ಯುಗಾದಿ ನಿಮ್ಮ ಜೀವನದ ಕಹಿ ದೂರ ಮಾಡಲಿ, ಸಿಹಿ ಹೆಚ್ಚಿಸಲಿ. ನವ ಸಂವತ್ಸರ ಎಲ್ಲರ ಬದುಕಿನಲ್ಲಿ ಸುಖ, ಶಾಂತಿ, ನೆಮ್ಮದಿ, ಹೊಸ ಭರವಸೆ ತರಲಿ ಎಂದು ಶುಭ ಹಾರೈಸುತ್ತೇನೆಂದು ತಿಳಿಸಿದ್ದಾರೆ.

SCROLL FOR NEXT