ಅಮಿತ್ ಶಾ 
ರಾಜ್ಯ

ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಮುಂದಿನ 5 ದಿನಗಳಲ್ಲಿ 2 ಬಾರಿ ರಾಜ್ಯಕ್ಕೆ ಅಮಿತ್ ಶಾ ಭೇಟಿ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಾಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿಯ ಚುನಾವಣಾ ಪ್ರಚಾರ ವೇಗ ಪಡೆದುಕೊಳ್ಳುತ್ತಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಾಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿಯ ಚುನಾವಣಾ ಪ್ರಚಾರ ವೇಗ ಪಡೆದುಕೊಳ್ಳುತ್ತಿದೆ.

ಮುಂದಿನ ಐದು ದಿನಗಳಲ್ಲಿ ಅಮಿತ್ ಶಾ ಅವರು ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಲಿದ್ದಾರೆ. ಮಾರ್ಚ್ 24 ಮತ್ತು 26 ರಂದು ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಮೊದಲ ಭೇಟಿ ಸಂದರ್ಭದಲ್ಲಿ ಶಾ ಅವರು ಮೂರು ಪ್ರತಿಮೆಗಳನ್ನು ಅನಾವರಣಗೊಳಿಸಲಿದ್ದಾರೆ.

ಬೆಂಗಳೂರಿನ ಸಂಸ್ಥಾಪಕ ಕೆಂಪೇಗೌಡ ಮತ್ತು ಲಿಂಗಾಯತ ಸಮಾಜ ಸುಧಾರಕ ಬಸವೇಶ್ವರರ ಪ್ರತಿಮೆಗಳನ್ನು ಅಮಿತ್ ಶಾ ಅವರು ವಿಧಾನಸೌಧದ ಮುಂಭಾಗದಲ್ಲಿ ಅನಾವರಣಗೊಳಿಸಲಿದ್ದಾರೆ.

ಮಾರ್ಚ್ 25 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ.

ಭೇಟಿಯ ವೇಳೆ ಮೋದಿ ಅವರು ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ ಮತ್ತು ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿಯು ವಿವಿಧ ಸಮುದಾಯಗಳನ್ನು ಅವರ ಪ್ರಸಿದ್ಧ ವ್ಯಕ್ತಿಗಳ ಪ್ರತಿಮೆಗಳ ಮೂಲಕ ಸಮಾಧಾನಪಡಿಸಲು ಪ್ರಯತ್ನಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!