ಸಿಎಂ ಬೊಮ್ಮಾಯಿ 
ರಾಜ್ಯ

ಮಹಾರಾಷ್ಟ್ರ ಪರಿಷತ್ ಕಲಾಪದಲ್ಲಿ ಸಿಎಂ ಬೊಮ್ಮಾಯಿಗೆ ಅವಮಾನ; ನಾಲಿಗೆ ಹರಿಬಿಟ್ಟ ಉದ್ಧವ್ ಠಾಕ್ರೆ ಬಣದ ಎಂಎಲ್‌ಸಿ ಡಾ. ಮನಿಷಾ

ಮಹಾರಾಷ್ಟ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಪಮಾನ ಮಾಡಲಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಎಂಎಲ್‌ಸಿ ಡಾ. ಮನಿಷಾ ಅವರು ಬೊಮ್ಮಾಯಿಯವರಿಗೆ ಅಪಮಾನ ಮಾಡಿದ್ದಾರೆ.

ಬೆಳಗಾವಿ: ಮಹಾರಾಷ್ಟ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಪಮಾನ ಮಾಡಲಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಎಂಎಲ್‌ಸಿ ಡಾ. ಮನಿಷಾ ಅವರು ಬೊಮ್ಮಾಯಿಯವರಿಗೆ ಅಪಮಾನ ಮಾಡಿದ್ದಾರೆ.

ಕರ್ನಾಟಕ ಸರ್ಕಾರ ವಿರುದ್ಧ ಮನೀಷಾ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಮಹಾರಾಷ್ಟ್ರ ಪರಿಷತ್ ಕಲಾಪದಲ್ಲಿ ಮಾತನಾಡಿರುವ ಮನಿಷಾ ಕರ್ನಾಟಕ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿರಿಂದ ದಾದಾಗಿರಿ ಹೆಚ್ಚಿದೆ. ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಹಗುರವಾಗಿ ಮಾತನಾಡಿದ್ದಾರೆಂದು ತಿಳಿದುಬಂದಿದೆ.

ಕರ್ನಾಟಕದ ಗಡಿಭಾಗದಲ್ಲಿರುವ 865 ಹಳ್ಳಿಗಳಿಗೆ 54 ಕೋಟಿ ರೂ. ವೆಚ್ಚದಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಯೋಜನೆ ಘೋಷಣೆ ಮಾಡಿದೆ. ಈ ಯೋಜನೆ ತಡೆಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಹೇಳಿದ್ದರು.

ಈ ಕುರಿತು ಮಹಾರಾಷ್ಟ್ರ ವಿಧಾನ ಪರಿಷತ್ ಕಲಾಪದಲ್ಲಿ ಚರ್ಚೆ ವೇಳೆ ಮಾತನಾಡಿರುವ ಎಂಎಲ್‌ಸಿ ಡಾ. ಮನಿಷಾ ಉದ್ಧಟತನ ಮೆರೆದಿದ್ದಾರೆ. ಕರ್ನಾಟಕ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿಯ ದಾದಾಗಿರಿ ಹೆಚ್ಚಾಗಿದೆ. ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಿ, ಮರಾಠಿ ಮಾತನಾಡಲು ಬಿಡುತ್ತಿಲ್ಲ. ಗಡಿಭಾಗದ 865 ಹಳ್ಳಿಗಳಿಗೆ ಕೇವಲ 54 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಯೋಜನೆ ನೀಡಲಾಗಿದೆ. ಉಭಯ ರಾಜ್ಯಗಳಲ್ಲಿ ಒಂದೇ ಪಕ್ಷದ ಸರ್ಕಾರ ಇದೆ. ನಾವು ನಮ್ಮ ಜನರಿಗೆ ಅನುದಾನ ನೀಡುತ್ತಿದ್ದೇವೆ. ಅದನ್ನು ಪ್ರಶ್ನೆ ಮಾಡಲು ಕರ್ನಾಟಕ ಸಿಎಂಗೆ ಎಷ್ಟು ಧೈರ್ಯ ಇದೆ? ಸುಪ್ರೀಂ ಕೋರ್ಟ್​ನಲ್ಲಿ ಕೇಸ್​ ಇನ್ನು ಬಾಕಿ ಇದೆ. ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರ ತಕ್ಕ ಉತ್ತರ ನೀಡಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT