ಮಧ್ಯವರ್ತಿ ಗಣಪತಿ ಭಟ್ 
ರಾಜ್ಯ

PSI ಅಕ್ರಮ ನೇಮಕಾತಿ ಪ್ರಕರಣ; ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆ

ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ.

ಕಾರವಾರ: ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ.

ಹೌದು.. ಪಿಎಸ್‍ಐ (PSI) ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿ ಭಾಗಿಯಾಗಿದ್ದರು ಎಂಬ ಆರೋಪದಡಿ ಬಂಧಿತರಾಗಿದ್ದ ಗಣಪತಿ ಭಟ್ ತನಿಖೆ ಎದುರಿಸಿದ್ದರು. ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.

ಪೊಲೀಸ್ ಮೂಲಗಳ ಪ್ರಕಾರ ಸಿದ್ದಾಪುರ ತಾಲೂಕಿನ ನೆಲಮಾವಿನ ಗಣಪತಿ ಭಟ್ ನೆಲಮಾವು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಹಲವು ರಾಜಕಾರಣಿಗಳ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದ ಇವರು ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಹಲವು ವಿಷಯಗಳಲ್ಲಿ ಬ್ರೋಕರಿಂಗ್ ಕೆಲಸ ಮಾಡುತ್ತಿದ್ದರು.

ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಕಾರಣ ತಿಳಿದುಬಂದಿಲ್ಲ. ಶವವನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಿದ್ದಾಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT