ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರ, ತೀವ್ರ ರಕ್ತಸ್ರಾವದಿಂದ ಬಾಲಕಿ ಸಾವು; ಆರೋಪಿ ಬಂಧನ

ಅಪ್ರಾಪ್ತ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾದ ನಂತರ ಸಾವನ್ನಪ್ಪಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ರಾಮನಗರ:  ಅಪ್ರಾಪ್ತ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾದ ನಂತರ ಸಾವನ್ನಪ್ಪಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ಆರೋಪದಡಿ ಯುವಕನೋರ್ವನನ್ನ ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, 12 ನೇ ತರಗತಿಯಲ್ಲಿ ಓದುತ್ತಿದ್ದ 17 ವರ್ಷದ ಸಂತ್ರಸ್ತೆಯ ಮೇಲೆ ಗ್ರಾಮದ ಸಮೀಪವಿರುವ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಲಾಗಿದೆ. ಆಕೆ ತೀವ್ರ ರಕ್ತಸ್ರಾವದಿಂದ ಆಕೆ ಸಾವನ್ನಪ್ಪಿದ್ದಾಳೆ.

ಅದೇ ಗ್ರಾಮದ ಯುವಕನಿಂದ ಈ ನೀಚ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಆತನನ್ನು ಬಂಧಿಸಲಾಗಿದೆ. ಸ್ಥಳಕ್ಕೆ ಕಗ್ಗಲೀಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತದೇಹ ಕುಂಬಳಗೂಡು ಸಮೀಪದ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಪೋಕ್ಸೊ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!