ವಿಧಾನಸೌಧ ಮುಂದೆ ಇಂದು ಅಮಿತ್ ಶಾ ಅವರಿಂದ ಉದ್ಘಾಟನೆಗೆ ಸಜ್ಜಾಗಿರುವ ಕೆಂಪೇಗೌಡ ಮತ್ತು ಬಸವಣ್ಣ ಪ್ರತಿಮೆ 
ರಾಜ್ಯ

ಬೆಂಗಳೂರಿಗೆ ಇಂದು ಅಮಿತ್ ಶಾ ಆಗಮನ: ಈ ರಸ್ತೆಗಳಲ್ಲಿ ವಾಹನ ಸಂಚಾರರಿಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

ಇಂದು ಭಾನುವಾರ ಬೀದರ್, ರಾಯಚೂರು ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರಲಿದ್ದಾರೆ. 

ಬೆಂಗಳೂರು: ಇಂದು ಭಾನುವಾರ ಬೀದರ್, ರಾಯಚೂರು ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರಲಿದ್ದಾರೆ. 

ಬೆಂಗಳೂರಿನಲ್ಲಿ ಶಕ್ತಿಕೇಂದ್ರ ವಿಧಾನಸೌಧದ ಮುಂಭಾಗದಲ್ಲಿ ಬೆಂಗಳೂರು ಸಂಸ್ಥಾಪಕ ಕೆಂಪೇಗೌಡ ಮತ್ತು ಸಮಾಜ ಸುಧಾರಕ ಬಸವೇಶ್ವರ ಸೇರಿದಂತೆ ಮೂರು ಪ್ರತಿಮೆಗಳನ್ನು ಅಮಿತ್‌ ಶಾ ಅನಾವರಣಗೊಳಿಸಲಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ, ರೇಸ್​ಕೋರ್ಸ್​ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ಆಯೋಜಿಸಲಾಗಿರುವ ಗುಜರಾತ್​ ಸಮಾಜದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 6.30ಕ್ಕೆ ವಿಧಾನಸೌಧದ ಮುಂದೆ ನಿರ್ಮಿಸಿರುವ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ನಂತರ ಬೆಂಗಳೂರು ಹಬ್ಬದಲ್ಲಿ ಭಾಗಿಯಾಗಲಿದ್ದಾರೆ. 

ಸಂಚಾರ ದಟ್ಟಣೆ, ಪರ್ಯಾಯ ಮಾರ್ಗ: ಇಂದು ವಿಧಾನಸೌಧ ಮುಂದೆ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದರಿಂದ ಕೆಲ ಗಂಟೆಗಳ ಕಾಲ  ಕೆಲ ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಬೆಂಗಳೂರು ಸಂಚಾರ ಪೊಲೀಸರು ಬಳ್ಳಾರಿ ರಸ್ತೆ, ಹೆಬ್ಬಾಳ ಸರ್ಕಲ್, ಮೇಖ್ರಿ ಸರ್ಕಲ್, ಕಾವೇರಿ ಜಂಕ್ಷನ್, ರಾಜಭವನ ರಸ್ತೆ, ಇನ್ ಫೆಂಟ್ರಿ ರಸ್ತೆ, ನೃಪತುಂಗ ರಸ್ತೆ, ಕ್ವೀನ್ಸ್ ರಸ್ತೆ, ಕೆ.ಆರ್ ಸರ್ಕಲ್, ಹಡ್ಸನ್ ಸರ್ಕಲ್, ಹಳೆ ಏರ್​ಪೋರ್ಟ್​ ರಸ್ತೆ, ಟ್ರಿನಿಟಿ ಸರ್ಕಲ್ ಹಾಗೂ ಟೌನ್ ಹಾಲ್ ಸುತ್ತಮುತ್ತ ಪರ್ಯಾಯ ಮಾರ್ಗ ಬಳಸಲು ಜನರಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT