ಸಿಎಂ ಬೊಮ್ಮಾಯಿ 
ರಾಜ್ಯ

ರಾಹುಲ್ ಗಾಂಧಿಗೆ ಪ್ರತ್ಯೇಕ ಕಾನೂನು ಇಲ್ಲ: ಸಿಎಂ ಬೊಮ್ಮಾಯಿ

ಕಾನೂನು ಎಲ್ಲರಿಗೂ ಒಂದೇ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಇತರರಿಗೆ ಪ್ರತ್ಯೇಕ ಕಾನೂನು ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಇತರರಿಗೆ ಪ್ರತ್ಯೇಕ ಕಾನೂನು ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದರು.

ದೇಶದಲ್ಲಿ ಕಾನೂನು ವ್ಯವಸ್ಥೆ ಅಸ್ತಿತ್ವದಲ್ಲಿದೆ. ಎಲ್ಲವೂ ಕಾನೂನಿನಂತೆ ನಡೆಯುತ್ತದೆ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದರು.

ಏನು ಬೇಕಾದರೂ ಮಾತನಾಡಬಹುದು ಎಂಬ ಭಾವನೆ ಕಾಂಗ್ರೆಸ್ ನಾಯಕರಲ್ಲಿತ್ತು. ಆದರೆ, ಸಾರ್ವಜನಿಕವಾಗಿ ಯಾರನ್ನಾದರೂ ಅವಮಾನಿಸಿದರೆ ಅದನ್ನು ಎದುರಿಸಲು ಕಾನೂನು ಇದೆ ಎಂಬುದು ಇದೀಗ ಅರ್ಥವಾಗಿದೆ ಎಂದು ತಿಳಿಸಿದರು.

ರಾಹುಲ್ ಒಬ್ಬ ವ್ಯಕ್ತಿಯ ವಿರುದ್ಧ ಮಾತ್ರವಲ್ಲದೆ ಸಮುದಾಯದ ವಿರುದ್ಧವೂ ಮಾತನಾಡಿದ್ದಾರೆ. ಇದರಿಂದ ಜನರಿಗೆ ನೋವುಂಟಾಗಿದೆ. ಹೀಗಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದರು.

ಏಪ್ರಿಲ್‌/ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಮತ್ತು ಮೇನಲ್ಲಿ ನಡೆಯಲಿರುವ ವಿಜಯೋತ್ಸವದಲ್ಲಿ ಭಾಗವಹಿಸುವಂತೆ ಪ್ರಧಾನಿಗೆ ಆಹ್ವಾನ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ