ಪ್ರಕಾಶ್ ರಾಜ್ 
ರಾಜ್ಯ

2ನೇ ಹಂತದ 'ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ: ಪ್ರಕಾಶ್ ರೈಗೆ ಯಶ್, ಚಿರಂಜೀವಿ, ಸೂರ್ಯ ಸಾಥ್!

ನಟ-ರಾಜಕಾರಣಿ ಪ್ರಕಾಶ್ ರಾಜ್ ಇತ್ತೀಚಿಗೆ 2ನೇ ಹಂತದ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ ನೀಡಿದ್ದಾರೆ. ಅವರ ಈ ಸೇವಾ ಕಾರ್ಯಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್, ಮೆಗಾಸ್ಟಾರ್ ಚಿರಂಜೀವಿ ಮತ್ತು ಕಾಲಿವುಡ್ ನ ಸೂರ್ಯ ನೆರವಾಗಿದ್ದಾರೆ. ಈ ವಿಚಾರವನ್ನು ಪ್ರಕಾಶ್ ರಾಜ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 

ಬೆಂಗಳೂರು: ನಟ-ರಾಜಕಾರಣಿ ಪ್ರಕಾಶ್ ರಾಜ್ ಇತ್ತೀಚಿಗೆ 2ನೇ ಹಂತದ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ ನೀಡಿದ್ದಾರೆ. ಅವರ ಈ ಸೇವಾ ಕಾರ್ಯಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್, ಮೆಗಾಸ್ಟಾರ್ ಚಿರಂಜೀವಿ ಮತ್ತು ಕಾಲಿವುಡ್ ನ ಸೂರ್ಯ ಅವರು ನೆರವಾಗಿದ್ದಾರೆ.

ಈ ವಿಚಾರವನ್ನು ಪ್ರಕಾಶ್ ರಾಜ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದರ ಮೂಲಕ ಹಂಚಿಕೊಂಡಿದ್ದಾರೆ. ಸರಳ ಸಜ್ಜನಿಕೆ, ಉದಾರ ಮನಸ್ಸಿನಿಂದ, ಎಂದೆಂದಿಗೂ ಮರೆಯಲಾಗದ ನೆನಪಾಗಿರುವವರು ನಮ್ಮೆಲ್ಲರ ಕಣ್ಮಣಿ ಡಾ. ಪುನೀತ್ ರಾಜ್‌ಕುಮಾರ್ ಅವರು ಯಾವಾಗಲೂ ನಮ್ಮೊಂದಿಗೆ ಇರಬೇಕೆಂದರೆ ಅವರು ಮಾಡುತ್ತಿದ್ದ ಕೆಲಸಗಳನ್ನು ಮುಂದುವರಿಸುವುದರಿಂದ ಮಾತ್ರ ಸಾಧ್ಯ. ಆ ಆಶಯದಿಂದ, ಆ ಕನಸಿನಿಂದ ಶುರುವಾಗಿದ್ದು ಅಪ್ಪು ಎಕ್ಸ್‌ಪ್ರೆಸ್‌ ಆಂಬುಲೆನ್ಸ್. ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಒಂದೊಂದು ಈ ಆಂಬುಲೆನ್ಸ್ ಇರಬೇಕು ಎಂಬುದು ನನ್ನ ಮತ್ತು ನನ್ನ ಪ್ರಕಾಶ್ ರಾಜ್ ಫೌಂಡೇಷನ್‌ನ ಕನಸು ಎಂದಿದ್ದಾರೆ. 

ಮೊದಲನೇ ಹಂತದಲ್ಲಿ ಮೈಸೂರಿನಿಂದ ಆಂಬ್ಯುಲೆನ್ಸ್ ಸೇವೆ ಪ್ರಾರಂಭಿಸಿದ್ದೇವೆ. 2ನೇ ಹಂತದಲ್ಲಿ ಬೀದರ್, ಕಲ್ಬುರ್ಗಿ, ಉಡುಪಿ, ಕೊಳ್ಳೇಗಾಲ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಐದು ಆಂಬ್ಯುಲೆನ್ಸ್‌ ಒದಗಿಸಲಾಗುತ್ತಿದೆ. ಈ ಬಾರಿ  ಮೆಗಾಸ್ಟಾರ್ ಚಿರಂಜೀವಿ ನಟ ಸೂರ್ಯ ಮತ್ತು ಯಶ್ ಮತ್ತು ಅವರ ಸ್ನೇಹಿತ ವೆಂಕಟ್ ಜೊತೆಯಲ್ಲಿದ್ದು, ಅವರ ಅಪಾರ ಔದಾರ್ಯಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ. 

'ಇದರ ಹಿಂದೆ ರಾಜಕಾರಣ ಇದೆಯಾ ಅಂತ ಕೇಳೋರು, ಕುಹಕ ಮಾತಾಡೋರು ಇರ್ತಾರೆ, ಇರಲಿ. ಹೌದು, ಇದು ರಾಜಕಾರಣನೇ. ನನ್ನ ಮತ್ತು ಯಶ್‌ನ ರಾಜಕಾರಣ. ಪ್ರೀತಿಯನ್ನು ಹಂಚುವ ಮಾನವೀಯತೆಯನ್ನು ಮೆರೆಯುವ, ನಮ್ಮೆಲ್ಲರ ಪ್ರೀತಿಯ ಪುನೀತ್ ರಾಜ್‌ಕುಮಾರ್ ಅವರನ್ನು ಸಂಭ್ರಮಿಸುವ ರಾಜಕಾರಣ' ಎಂದು ಪ್ರಕಾಶ್ ರಾಜ್ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್