ರಾಜ್ಯ

ಒಳ ಮೀಸಲಾತಿ ವಿವಾದ: ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಲ್ಲ; ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ

Nagaraja AB

ಬೆಂಗಳೂರು: ಸದಾಶಿವ ಆಯೋಗದ ವರದಿಯನ್ನು ಅನುಷ್ಟಾನಗೊಳಿಸಲ್ಲ ಎಂದು ಬಂಜಾರ ಸಮುದಾಯದ ಮುಖಂಡರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿಯನ್ನು ಉಪ ಸಮಿತಿ ಮೂಲಕ   ಅನುಷ್ಠಾನಗೊಳಿಸಿದ್ದೇವೆ. ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದುಹಾಕಬಹುದು ಎಂಬ ಆತಂಕ ಅವರಲ್ಲಿತ್ತು, ಆದರೆ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯ ಎಸ್‌ಸಿ ಸಮುದಾಯದಲ್ಲೇ ಉಳಿಯುವಂತೆ ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇನೆ ಎಂದರು. 

ಭವಿಷ್ಯದಲ್ಲಿ ಸದಾಶಿವ ಆಯೋಗ ವರದಿ ಅನುಷ್ಠಾನಗೊಳಿಸದಿರಲು ನಿರ್ಧರಿಸಿದ್ದೇವೆ. ಯಡಿಯೂರಪ್ಪ ಬಂಜಾರ ತಾಂಡಾ ಅಭಿವೃದ್ಧಿ ಮಂಡಳಿ ಆರಂಭಿಸಿದ್ದು, ಯಾವುದೇ ಸಮಸ್ಯೆಗಳಿದ್ದರೆ ಚರ್ಚಿಸಿ ಬಗೆಹರಿಸಿಕೊಳ್ಳಬಹುದು. ಒಳಮೀಸಲಾತಿ ವಿರುದ್ಧದ ಹೋರಾಟದ ಹಿಂದೆ ಕಾಂಗ್ರೆಸ್ ಷಡ್ಯಂತ್ರ ಮತ್ತು ಸ್ಥಳೀಯ ಕಾಂಗ್ರೆಸ್ ನಾಯಕರು ಪ್ರಚೋದನೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. 

SCROLL FOR NEXT