ರಾಜ್ಯ

ರಾಜ್ಯದ ನೂತನ 9 ವಿಶ್ವವಿದ್ಯಾಲಯಗಳು: ಸಿಎಂ ಬೊಮ್ಮಾಯಿ ಉದ್ಘಾಟನೆ

Nagaraja AB

ಬೆಂಗಳೂರು: ರಾಜ್ಯದ ನೂತನ 9 ವಿಶ್ವವಿದ್ಯಾಲಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವರ್ಚುಯಲ್ ಮೂಲಕ ಉದ್ಘಾಟಿಸಿದರು. ಚಾಮರಾಜನಗರ, ಮಂಡ್ಯ, ಬೀದರ್​, ಕೊಡಗು, ಕೊಪ್ಪಳ, ಬಾಗಲಕೋಟೆ, ಹಾವೇರಿ,  ಕೋಲಾರ ಮತ್ತು ರಾಯಚೂರಲ್ಲಿ ನೂತನ ವಿಶ್ವವಿದ್ಯಾಲಯಗಳು ತಲೆ ಎತ್ತಿವೆ.

ಇದೇ ಸಂದರ್ಭದಲ್ಲಿ ಸರ್ಕಾರಿ  ಕೃಷ್ಣರಾಜೇಂದ್ರ ಸಿಲ್ವರ್‌ ಜ್ಯೂಬಿಲಿ ತಾಂತ್ರಿಕ ಮಹಾವಿದ್ಯಾಲಯ, ಉನ್ನತ ಶಿಕ್ಷಣ ಸೌಧ ಹಾಗೂ ತಾಂತ್ರಿಕ ಶಿಕ್ಷಣ ಭವನ ಕಟ್ಟಡ ಉನ್ನತೀಕರಣದ ಶಂಕುಸ್ಥಾಪನೆ ನೆರವೇರಿಸಲಾಯಿತು.

ನಂತರ ಮಾತನಾಡಿದ ಮುಖ್ಯಮಂತ್ರಿ, ಮುಂಬರುವ ದಿನಗಳಲ್ಲಿ ಕರ್ನಾಟಕವನ್ನು ವಿಶ್ವದಲ್ಲಿಯೇ ಅತಿ ದೊಡ್ಡ ಎಜುಕೇಷನ್ ಹಬ್ ಮಾಡಬೇಕೆಂಬುದು ಸರ್ಕಾರದ ಗುರಿಯಾಗಿದೆ ಎಂದರು.

ರಾಜ್ಯದ 7 ಇಂಜಿನಿಯರಿಂಗ್‌ ಕಾಲೇಜುಗಳನ್ನು ಕೆಐಟಿಗಳಾಗಿ ಉನ್ನತೀಕರಿಸಲಾಗಿದೆ. ಜಿಲ್ಲೆಗೊಂದು ವಿಶ್ವವಿದ್ಯಾಲಯ ಇರಬೇಕು ಎಂಬ ಆಶಯದೊಂದಿಗೆ 9 ಹೊಸ ವಿಶ್ವವಿದ್ಯಾಲಯಗಳನ್ನು ನಿರ್ಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

SCROLL FOR NEXT