ರಾಜ್ಯ

ಬೆಂಗಳೂರು: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸಭೆ

Nagaraja AB

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬುಧವಾರ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.  

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸುಸೂತ್ರವಾಗಿ ಚುನಾವಣೆ ನಡೆಸಲು‌ ಸಹಕರಿಸುವಂತೆ ಕೋರಿದರು.

ಬಿಬಿಎಂಪಿ ವ್ಯಾಪ್ತಿಯ 8 ವಲಯಗಳ ಮುಖ್ಯ ಅಭಿಯಂತರರು ಮತ್ತು ಜಂಟಿ ಆಯುಕ್ತರ ಸಭೆ ನಡೆಸಿ ಈ ಕ್ಷಣದಿಂದಲೇ ನಿಯಮಾನುಸಾರ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸುವಂತೆ ತುಷಾರ್ ಗಿರಿನಾಥ್ ಸೂಚಿಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಸ್ವೀಪ್ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಯುವ ಮತದಾರರ ನೋಂದಣಿ, ವಿಶೇಷ ಚೇತನರ ಮತದಾರರ ಗುರುತಿಸುವಿಕೆ, ನೋಂದಣಿ, ತೃತೀಯ ಲಿಂಗಿ ಮತದಾರರ ನೋಂದಣಿ, ದಮನಿತ ಮಹಿಳಾ ಮತದಾರರ ನೋಂದಣಿ ವಿಶೇಷ ಅಭಿಯಾನ ಸೇರಿದಂತೆ ಮತ್ತಿತರ ಮತದಾನ  ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

SCROLL FOR NEXT