ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಚಿನ್ನದ ಸರ ಕದಿಯಲು ಹೋಗಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ, ಇಬ್ಬರು ಸರಗಳ್ಳರ ಬಂಧನ

ಮಹಿಳೆಯೊಬ್ಬರ ಚಿನ್ನದ ಸರ ದೋಚುವ ಉದ್ದೇಶದಿಂದ ಮಚ್ಚಿನಿಂದ ಹಲ್ಲೆ ನಡೆಸಿದ್ದ ಇಬ್ಬರು ಸರಗಳ್ಳರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಆಡುಗೋಡಿ ಸಮೀಪದ ಎಲ್‌ಆರ್ ನಗರದ ನಿವಾಸಿಗಳಾದ ಮನೋಜ್ ಕುಮಾರ್ ಮತ್ತು ಫ್ರಾಂಕ್ಲಿನ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಮಹಿಳೆಯೊಬ್ಬರ ಚಿನ್ನದ ಸರ ದೋಚುವ ಉದ್ದೇಶದಿಂದ ಮಚ್ಚಿನಿಂದ ಹಲ್ಲೆ ನಡೆಸಿದ್ದ ಇಬ್ಬರು ಸರಗಳ್ಳರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಆಡುಗೋಡಿ ಸಮೀಪದ ಎಲ್‌ಆರ್ ನಗರದ ನಿವಾಸಿಗಳಾದ ಮನೋಜ್ ಕುಮಾರ್ ಮತ್ತು ಫ್ರಾಂಕ್ಲಿನ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಮಾರ್ಚ್ 6 ರಂದು ಸಂಜೆ ಸಾರಕ್ಕಿ ಕೆರೆಯ ಬಳಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜೆಪಿ ನಗರ ಏಳನೇ ಹಂತದ ನಿವಾಸಿಯಾಗಿರುವ ಸಂತ್ರಸ್ತೆ ಸರಸ್ವತಿ ದೇವಸ್ಥಾನದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆಕೆಯ ಚಿನ್ನದ ಸರವನ್ನು ದೋಚಲು ಯತ್ನಿಸಿದ್ದಾರೆ. ಮಹಿಳೆ ಅದನ್ನು ವಿರೋಧಿಸಿ ಅವರೊಂದಿಗೆ ಜಗಳವಾಡಿದ್ದಾರೆ.

ಬಳಿಕ ಆರೋಪಿಗಳು ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೈಗೆ ಗಂಭೀರ ಗಾಯ ಮಾಡಿ ಪರಾರಿಯಾಗಿದ್ದಾರೆ. 'ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗಿದೆ ಮತ್ತು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಗಳನ್ನು ಗುರುತಿಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಮನೋಜ್‌ಕುಮಾರ್‌ಗೆ ಕ್ರಿಮಿನಲ್ ಹಿನ್ನೆಲೆಯಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರವೂ ಆತ ಅಪರಾಧಗಳನ್ನು ಮಾಡುತ್ತಲೇ ಇದ್ದ. ಅಲ್ಲದೆ, ಆತನ ವಿರುದ್ಧ ಆಡುಗೋಡಿ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣವೂ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT