ರಾಜ್ಯ

ದಕ್ಷಿಣ ಕನ್ನಡ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು!

Shilpa D

ಕಡಬ: ದೈವಾರಾಧ‌ನೆ ನಡೆಯುತ್ತಿದ್ದ ಸ್ಥಳದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದೈವ ನರ್ತನ ನಡೆಯುತ್ತಿರುವಾಗಲೇ ದೈವ ನರ್ತಕ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಮೂಲಂಗೀರಿ ನಿವಾಸಿ ಕಾಂತು ಅಜಿಲ ( ಬಾಬು) ಎಂಬವರೇ ಮೃತಪಟ್ಟ ವ್ಯಕ್ತಿ.

ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾ.30 ರಂದು ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು.  ದೈವ ನರ್ತನ ನಡೆಯುತ್ತಿದ್ದಾಗಲೇ ಕಾಂತು ಅಜಿಲ ಅವರು ಕುಸಿದು ಬಿದ್ದಿದ್ದಾರೆ. ಕೆಲವೇ ಹೊತ್ತಿನಲ್ಲಿ ಕೊನೆಯುಸಿರೆಳೆದಿದ್ದಾರೆ. ದೈವ ನರ್ತನದ ಸನ್ನಿವೇಶ ಮತ್ತು ನರ್ತಕ ಕುಸಿದು ಬೀಳುವ ದೃಶ್ಯ ಅಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಎರಡು ದೈವಗಳ ನರ್ತನ ಸೇವೆ ಏಕ ಕಾಲದಲ್ಲಿ ನಡೆಯುತ್ತಿತ್ತು. ಭಕ್ತರು ಸುತ್ತಲೂ ಕುಳಿತು ನೋಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಕಾಂತು ಅಜಿಲ ನರ್ತನ‌ ಸೇವೆಯಲ್ಲಿ ತಲ್ಲೀನರಾಗಿದ್ದಾಗಲೇ ಕುಸಿದು ಬಿದ್ದರು. ತಕ್ಷಣ ನೆರೆದ ಭಕ್ತರು ಧಾವಿಸಿ ಎಬ್ಬಿಸಿದರು.

ಆದರೆ, ಕೆಲವೇ ಹೊತ್ತಿನಲ್ಲಿ ಕಾಂತು ಅಜಿಲ ಮೃತಪಟ್ಟಿದ್ದಾರೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೃದಯಾಘಾತಕ್ಕೆ ಒಳಗಾಗಿರಬಹುದೆಂದು ಅಂದಾಜಿಸಲಾಗಿದೆ.

SCROLL FOR NEXT