ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ನಂದಿನಿ ಉತ್ಪನ್ನದ ಮೇಲೆ ಹಿಂದಿ; ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ: ಹೆಚ್.ಡಿ. ಕುಮಾರಸ್ವಾಮಿ

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು. ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್‌ಗೆ ಆದೇಶ ನೀಡಿರುವುದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರು: ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು. ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್‌ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 'ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು ವಿಲೀನ ಮಾಡುವುದಾಗಿ ಹೇಳಿದ್ದರು. ಇದೀಗ ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಅರಂಭವಾ? ಎಂದು ಕೇಳಿದ್ದಾರೆ.

ಶಾ ಅವರ ಹೇಳಿಕೆಯನ್ನು ಕನ್ನಡಿಗರು ಖಂಡಿಸಿದ್ದರು. ನಾನೂ ವಿರೋಧಿಸಿದ್ದೆ. ಆಮೇಲೆ ಸುಮ್ಮನಾಗಿದ್ದ ಬಿಜೆಪಿ ಸರ್ಕಾರ, ಈಗ ಆಹಾರ ಸುರಕ್ಷತಾ ಪ್ರಾಧಿಕಾರದ ಮೂಲಕ ಹಿಂಬಾಗಿಲಿನಿಂದ ಮೊಸರಿನ ಪಕ್ಕ ದಹಿ ಸೇರಿಸಿ ಕನ್ನಡಿಗರ ಸ್ವಾಭಿಮಾನಕ್ಕೆ ಸೆಡ್ಡು ಹೊಡೆದಿದೆ. ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ? ಎಂದು ಪ್ರಶ್ನಿಸಿದ್ದಾರೆ.

ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು ಎಂದು ದೂರಿದ್ದಾರೆ.

ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿದ್ದೇವೆ ಎಂದರೆ ಇಷ್ಟ ಬಂದಹಾಗೆ ಒಳ ನುಸುಳುವುದಲ್ಲ, ಸೌಮ್ಯವಾಗಿದ್ದೇವೆ ಎಂದರೆ ಸುಮ್ಮನಿದ್ದೇವೆ ಎಂದಲ್ಲ. ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ. ಕರ್ನಾಟಕ ಭಾರತ ಗಣರಾಜ್ಯದ ಒಂದು ಭಾಗವೇ ಹೊರತು ಗುಜರಾತಿನ ವಸಾಹತುವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಇಬ್ಬರೂ ಕರ್ನಾಟಕಕ್ಕೆ ಬಲು ಬಿಡುವು ಮಾಡಿಕೊಂಡು ಬಂದರು ಎಂದರೆ, ಕೇವಲ ಚುನಾವಣೆ ಉದ್ದೇಶಕ್ಕೇ ಎಂದುಕೊಂಡಿದ್ದೆ. ಆದರೆ, ಕರ್ನಾಟಕದಲ್ಲಿ ನಡೆದ ಅವರಿಬ್ಬರ ಶೋಗಳ ಸವಾರಿ ನಮ್ಮ ನಂದಿನಿಯ ಹೆಸರಿಗೇ ಕುತ್ತು ತರುತ್ತದೆ ಎಂದು ಭಾವಿಸಿರಲಿಲ್ಲ ಎಂದಿದ್ದಾರೆ.

ಆರೂವರೆ ಕೋಟಿ ಕನ್ನಡಿಗರ ಮನೋಭಾವಕ್ಕೆ ವಿರುದ್ಧವಾಗಿ ದಹಿ ಎನ್ನುವ ಪದವನ್ನು ಮುದ್ರಿಸಿದ್ದೇ ಕೆಎಂಎಫ್ ಮಾಡಿರುವ ದೊಡ್ದ ತಪ್ಪು. ಇದು ರಾಜ್ಯ ಬಿಜೆಪಿ ಸರ್ಕಾರದ ಗಮನಕ್ಕೆ ಬಾರದೆ ಆಗಿರುವ ಕೃತ್ಯವಲ್ಲ. ಕಾಣದ ಕೈಗಳ ಕಳ್ಳಾಟ ಇಲ್ಲಿ ಸ್ಪಷ್ಟ. ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ  ಹಿಂದಿ ಹೇರಿಕೆ ಆಗಿದೆ. ಅದನ್ನು ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಯಶವಂತಪುರದಲ್ಲಿ ಪಂಚರತ್ನ ರಥಯಾತ್ರೆ ನಡೆಯುವ ವೇಳೆ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ' ನಂದಿನಿ ಉಳಿಸಿ ' ಎಂದು ಮೊಸರು, ಹಾಲಿನ ಹಾರ ಹಾಕಿ ನನ್ನ ಗಮನ ಸೆಳೆದಿದ್ದರು. ನಂದಿನಿಗೆ ಕುಣಿಕೆ ಬಿಗಿಯುವ ಯಾವುದೇ ದುಷ್ಕೃತ್ಯ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT