ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್; ಇಬ್ಬರು ಸವಾರರ ದುರ್ಮರಣ

ಅತಿ ವೇಗವಾಗಿ ಬಂದ ಬೈಕ್ ಒಂದು ಯಲಹಂಕ ಕಾಫಿ ಡೇ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು: ಅತಿ ವೇಗವಾಗಿ ಬಂದ ಬೈಕ್ ಒಂದು ಯಲಹಂಕ ಕಾಫಿ ಡೇ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಗುದ್ರಾಮ್‌, ಜುಗ್ ರಾಜ್ ಪ್ರಹಾಪತ್ ಎಂದು ಗುರುತಿಸಲಾಗಿದೆ. ರಾಜಸ್ಥಾನಕ್ಕೆ ತೆರಳಲು ದೇವನಹಳ್ಳಿಯ ವಿಮಾನ ನಿಲ್ದಾಣಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಬೈಕ್ ನಲ್ಲಿ ವೇಗವಾಗಿ ಬರುತ್ತಿದ್ದರಿಂದ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರ ತಲೆ ಡಿವೈಡರ್ ಗೆ ಬಡಿದಿತ್ತು. ಸ್ಥಳದಲ್ಲೇ ಓರ್ವ ಮೃತಪಟ್ಟರೆ ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. 

ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯಲಹಂಕ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel