ರಾಜ್ಯ

ದೇವಸ್ಥಾನಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರನ್ನು ಶೋಧಿಸಿದ ಚುನಾವಣಾಧಿಕಾರಿಗಳು!

Ramyashree GN

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಕಾರನ್ನು ತಡೆದ ಚುನಾವಣಾಧಿಕಾರಿಗಳು ಶುಕ್ರವಾರ ಪರಿಶೀಲನೆ ನಡೆಸಿದರು.

ಮೇ 10 ರಂದು ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

ಅಧಿಕಾರಿಗಳು ವಾಹನ ತಪಾಸಣೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೂಲಗಳ ಪ್ರಕಾರ, ಬುಧವಾರ ಚುನಾವಣಾ ವೇಳಾಪಟ್ಟಿ ಪ್ರಕಟವಾದ ದಿನದಂದು ತಮ್ಮ ಅಧಿಕೃತ ಕಾರನ್ನು ಸರ್ಕಾರಕ್ಕೆ ಒಪ್ಪಿಸಿದ ಬೊಮ್ಮಾಯಿ ಅವರು ಖಾಸಗಿ ಕಾರಿನಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಹೊಸಹುಡ್ಯ ಚೆಕ್‌ಪೋಸ್ಟ್‌ನಲ್ಲಿ ಅದನ್ನು ನಿಲ್ಲಿಸಲಾಯಿತು.

'ಆಕ್ಷೇಪಾರ್ಹವಾದ ಏನೂ ಕಂಡುಬಂದಿಲ್ಲದ ಕಾರಣ ಅಧಿಕಾರಿಗಳು ವಾಹನವು ತೆರಳಲು ಅನುಮತಿ ನೀಡಿದರು ಮತ್ತು ಮುಖ್ಯಮಂತ್ರಿ ತಮ್ಮ ಪ್ರಯಾಣವನ್ನು ಮುಂದುವರೆಸಿದರು' ಎಂದು ಮೂಲಗಳು ತಿಳಿಸಿವೆ.

SCROLL FOR NEXT