ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಲಾಡ್ಜ್ ನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರಿನ ಲಾಡ್ಜ್‌ನಲ್ಲಿ ಶುಕ್ರವಾರ ಬೆಳಗ್ಗೆ  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರು: ಮಂಗಳೂರಿನ ಲಾಡ್ಜ್‌ನಲ್ಲಿ ಶುಕ್ರವಾರ ಬೆಳಗ್ಗೆ  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಮೈಸೂರಿನ ವಿಜಯನಗರದ 46 ವರ್ಷ ವಯಸ್ಸಿನ ದೇವೇಂದ್ರ, ಅವರ ಪತ್ನಿ ಮತ್ತು 14 ಮತ್ತು 10 ವರ್ಷದ ಇಬ್ಬರು ಪುತ್ರಿಯರು ಎಂದು ಗುರುತಿಸಲಾಗಿದೆ.

ಮಂಗಳೂರಿನ ಕೆಎಸ್ ರಾವ್ ರಸ್ತೆಯಲ್ಲಿರುವ ಕರುಣಾ ರೆಸಿಡೆನ್ಸಿಯ ಲಾಡ್ಜ್ ಕೊಠಡಿಯಲ್ಲಿ ದೇವೇಂದ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಟುಂಬವು ಮೂರು ದಿನಗಳ ಹಿಂದೆ ಹೋಟೆಲ್ ರೂಂ ಕಾಯ್ದಿರಿಸಿತ್ತು, ಆರಂಭದಲ್ಲಿ ಅವರು ಒಂದು ದಿನ ಉಳಿಯಲು ಯೋಜಿಸಿದ್ದರು, ಕ್ರಮೇಣ ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಿದರು.

ದೇವೇಂದ್ರ ಮೊದಲು ತನ್ನ ಮಕ್ಕಳು ಮತ್ತು ಹೆಂಡತಿಗೆ ವಿಷ ನೀಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ. ನಾವು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅವರು ಹೇಳಿದರು.

ಆತ್ಮಹತ್ಯೆ ಪತ್ರದಲ್ಲಿ ದೇವೇಂದ್ರ ಅವರು ಆರ್ಥಿಕ ಸಮಸ್ಯೆಗಳಿದ್ದು, ಸಾಲ ಮಾಡಿರುವುದಾಗಿ ತಿಳಿಸಿದ್ದಾರೆ. ನಗರ ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?