ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಪಿ.ನಡ್ಡಾ. 
ರಾಜ್ಯ

5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಪ್ರತಿದಿನ ಅರ್ಧ ಲೀಟರ್ ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.

ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಣಾಳಿಕೆ ಸಲಹಾ ಸಮಿತಿ ಸಂಚಾಲಕ ಮತ್ತು ಸಚಿವ ಡಾ.ಕೆ.ಸುಧಾಕರ್ ಅವರು, ಪ್ರಣಾಳಿಕೆ ಸಿದ್ಧಪಡಿಸಲು 38 ವಿವಿಧ ವಿಭಾಗ, 178 ಕ್ಷೇತ್ರಗಳಲ್ಲಿ ಸಲಹೆ ಪಡೆಯಲಾಗಿದೆ. ಮಿಸ್ ಕಾಲ್ ಮೂಲಕ 29,306 ಸಲಹೆ ಸೇರಿ ಒಟ್ಟು 6 ಲಕ್ಷ ಸಲಹೆ ಬಂದಿವೆ. ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧಪಡಿಸಲು ಸಹಕರಿಸಿದ್ದಾರೆ. ತಜ್ಞರ ಕಡೆಯಿಂದ 900 ಸಲಹೆ ಬಂದಿವೆ, 50 ಕ್ಷೇತ್ರ ತಜ್ಞರ ಸಲಹೆ ಬಂದಿದೆ ಎಂದು ಹೇಳಿದರು.

ಆರೋಗ್ಯಯುಕ್ತ ನಾಡು, ಯುವಕರ ಸಬಲೀಕರಣ, ಮಹಿಳೆಯರನ್ನು ಮುಖ್ಯ ವಾಹಿನಿಗೆ ತರಲು ಮತ್ತು ವೃದ್ಧರು, ಅಂಗವಿಕಲರು, ವಿಧವೆಯರಿಗೆ ಅನುಕೂಲಕರ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಸಿಲಿಂಡರ್ ಬೆಲೆ ಬಗ್ಗೆಯೂ ಪ್ರಣಾಳಿಕೆಯಲ್ಲಿದೆ ಎಂದು ತಿಳಿಸಿದರು.

ಬಳಿಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬೇರೆ ಪಕ್ಷದ ರೀತಿ ಸುಳ್ಳು ಭರವಸೆ ಕೊಡದೆ ಈಡೇರಿಸುವ ಭರವಸೆ ಕೊಡುತ್ತಿದ್ದೇವೆ. ಕಾಂಗ್ರೆಸ್ 13 ರಾಜ್ಯದಲ್ಲಿ ಭರವಸೆ ನೀಡಿದ್ದರೂ ಜನರು ತಿರಸ್ಕಾರ ಮಾಡಿದ್ದಾರೆ. ಜನರಿಗೆ ಅವರ ಮೇಲೆ ವಿಶ್ವಾಸ ಇಲ್ಲ, ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ಭರವಸೆ ಈಡೇರಿಸಲಾಗಿಲ್ಲ, ಹಾಗಾಗಿ ಅವರನ್ನು ಜನ ನಂಬಲ್ಲ ಎಂದು ಹೇಳಿದರು.

ಸಿಎಂ ಬೊಮ್ಮಾಯಿ ಮಾತನಾಡಿ, ಇಡೀ ರಾಷ್ಟ್ರದ ಆಡಳಿತ ಚುಕ್ಕಾಣಿ ಹಿಡಿದಿರುವ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷ, ದೇಶದ ಆಡಳಿತದಲ್ಲಿ ದಿಕ್ಸೂಚಿ ಪಾತ್ರ ವಹಿಸುತ್ತಿದೆ. ದೇಶವನ್ನು, ರಾಜ್ಯವನ್ನು ಗಮನದಲ್ಲಿರಿಸಿಕೊಂಡು ಪ್ರಣಾಳಿಕೆ ಮಾಡಬೇಕು, ಆಡಳಿತ ನಡೆಸಬೇಕಿದೆ. ಅತ್ಯಂತ ಪ್ರಬಲ ರಾಜ್ಯಗಳ ಒಕ್ಕೂಟವೇ ದೇಶದ ಬಲ. ಕರ್ನಾಟಕದ ಅಭ್ಯುದಯಕ್ಕೆ ಪೂಕರವಾಗಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ ಎಂದು ಹೇಳಿದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಏನೇನಿದೆ...?

  • ಬಿಪಿಎಲ್‌ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ ಗಳನ್ನು ಉಚಿತವಾಗಿ ವಿತರಿಸುತ್ತೇವೆ.
  • ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಅರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‌ ಗಳಲ್ಲಿ ‘ಅಟಲ್ ಆಹಾರ ಕೇಂದ್ರ’ ವನ್ನು ಸ್ಥಾಪಿಸುತ್ತೇವೆ.
  • ‘ಪೋಷಣೆ’ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕಳೆ ಶ್ರೀ ಅನ್ನ ಸಿರಿಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.
  • ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.
  • ರಾಜ್ಯದಾದ್ಯಂತ ನಿವೇಶನ ರಹಿತ/ ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
  • ‘ಒನಕೆ ಓಬವ್ವ 'ಸಾಮಾಜಿಕ ನ್ಯಾಯ ನಿಧಿ’ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರು ಐದು ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.
  • ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ‘ಸುಲಲಿತ ಜೀವನ’ಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.
  • “ವಿಶ್ವೇಶ್ವರಯ್ಯ ವಿದ್ಯಾ ಯೋಜನೆ’ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.
  • ‘ಸಮನ್ವಯ ಯೋಜನೆ’ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.
  • ಐಎಎಸ್/ಕೆಎಎಸ್/ಬ್ಯಾಂಕಿಂಗ್/ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.
  • ‘ಮಿಷನ್ ಸ್ವಾಸ್ಥ್ಯ ಕರ್ನಾಟಕ’ದ ಅಡಿ ಸರ್ಕಾರಿ ಆಸ್ಪತ್ರೆ /ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್ ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.
  • ನಮ್ಮಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ‘ರಾಜ್ಯ ರಾಜಧಾನಿ ಪ್ರದೇಶ’ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‌ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.
  • ಕರ್ನಾಟಕವನ್ನು ಎಲೆಕ್ನಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‌ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್ ಗಳನ್ನು ಎಲೆಕ್ನಿಕ್ ಬಸ್‌ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ‘ಇಬಿ ಸಿಟಿ’ ಅಭಿವೃದ್ಧಿ
  • ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 2 30,000 ಕೋಟಿ ಮೊತ್ತದ ‘ಕೆ-ಅಗಿ ಫಂಡ್’ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್ ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್ ಗಳನ್ನು ಸ್ಥಾಪಿಸುತ್ತೇವೆ.
  • ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒದಗಿಸಿ ಕರ್ನಾಟಕವನ್ನು ದೇಶದ ಅತ್ಯಂತ ಮೆಚ್ಚಿನ ಪ್ರವಾಸಿ ತಾಣವನ್ನಾಗಿ ರೂಪಿಸಲು ಕಲ್ಯಾಣ ಸರ್ಕ್ಯೂಟ್‌ ಬನವಾಸಿ ಸರ್ಕ್ಯೂಟ್, ಪರಶುರಾಮ ಸರ್ಕ್ಯೂಟ್ ಮತ್ತು ಕಾವೇರಿ ಸರ್ಕ್ಯೂಟ್ ಗಾಣಗಾಪುರ ಕಾರಿಡಾರ್್ರ ಅನ್ನು ಅಭಿವೃದ್ಧಿಪಡಿಸಲು 91,500 ಕೋಟಿ ವಿನಿಯೋಗಿಸುತ್ತೇವೆ.
  • ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಬೆಂಗಳೂರಿನ ಆಚೆ ಸೃಷ್ಟಿಸುವ ಲಾಜಿಸ್ಟಿಕ್ಸ್‌ ಕೈಗಾರಿಕಾ ಕ್ಲಸ್ಟರ್‌ಗಳು, ಸಂಪರ್ಕ ಮತ್ತು ರಫ್ತು ಸೌಲಭ್ಯಗಳನ್ನು ಒಳಗೊಂಡ ಸಮಗ್ರ ಯೋಜನೆಯನ್ನು ಸಂಯೋಜಿಸುವ ಮೂಲಕ ‘ಉತ್ಪಾದನಾ ಆಧರಿತ ಪ್ರೋತ್ಸಾಹ’ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸುತ್ತೇವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT