ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ. ವಿದ್ಯಾರ್ಥಿ ಸಾವು

ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಸಂಗ್ರಹ ಚಿತ್ರ
Manjula VN
Updated On : 1 May 2023, 9:26 am

ಬೆಂಗಳೂರು: ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಅನಾಹಿತಾ ಪಾಲ್ (17) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ವಿದ್ಯಾರ್ಥಿನಿ ಪೋಷಕರೊಂದಿಗೆ ಬನ್ನೇರುಘಟ್ಟ ರಸ್ತೆಯ ಡೈರಿ ಸರ್ಕಲ್ ಬಳಿ ವಾಸವಿದ್ದಳು.

ಜೆಪಿ ನಗರ 3ನೇ ಹಂತದ 8ನೇ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ.

Advertisement

Advertisement

ಈ ವೇಳೆ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಈ ಸಂಬಂಧ ಜಯನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರು ಚಾಲಕನನ್ನು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement