ರಾಜ್ಯ

ಪ್ರಧಾನಿ ಮೋದಿ ಸಮಾವೇಶಕ್ಕೆ ಜನ ಸೇರಿಸಲು ಹಣ ಹಂಚಿಕೆ ಆರೋಪ: ಶಾಸಕ ರಾಜೀವ್ ವಿರುದ್ಧ ಪ್ರಕರಣ ದಾಖಲು

Manjula VN

ಚಿಕ್ಕೋಡಿ: ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕುಡಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಎಪ್ರಿಲ್ 29ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ದೇಶದಿಂದ ಮುಗಳಖೋಡ ಪಟ್ಟಣದ ಬಳಿ ಶಾಸಕ ಪಿ ರಾಜೀವ್ ಬೆಂಬಲಿಗರು ಹಣ ಹಂಚಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ವೈರಲ್ ಆಗಿದೆ.. ಈ ವಿಡಿಯೋ ಆಧರಿಸಿ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

ಶಾಸಕ ಪಿ.ರಾಜೀವ್ ನಿರ್ದೇಶನದ ಮೇರೆಗೆ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತ ಹಾಲಪ್ಪ ಹನುಮಂತ ಶೇಗುಣಶಿ ಅವರು, ಹಣ ಹಂಚಿಕೆ ಮಾಡಿ, ಸಮಾವೇಶಕ್ಕೆ ಜನರನ್ನು ಕರೆದಿದ್ದಾರೆಂದು ಹೇಳಲಾಗುತ್ತಿದೆ.

ವಿಡಿಯೇ ವೈರಲ್ ಆಗುತ್ತಿದ್ದಂತೆಯೇ ಇದನ್ನು ಗಮನಿಸಿದ ಚುನಾವಣಾಧಿಕಾರಿಗಳುತ ರಾಯಬಾಗ ಪೊಲೀಸ್ ಠಾಣೆಯಲ್ಲಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

SCROLL FOR NEXT