ಬೆಂಗಳೂರು: ಅಲ್ಪ ಸಂಖ್ಯಾತರ ಓಲೈಕೆಯನ್ನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲೂ ಮುಂದುವರೆದಿದ್ದು, ಇದು ಮುಸ್ಲಿಂ ಮೂಲಭೂತವಾದಿಗಳು ಸಿದ್ದಪಡಿಸಿರುವ ಪ್ರಣಾಳಿಕೆ ಎಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಟೀಕಿಸಿದ್ದಾರೆ.
ಪ್ರಸ್ತುತ ವಿಧಾನಸಭೆ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಹಿಮಂತ್ ಬಿಸ್ವಾ ಶರ್ಮಾ ಅವರು, ಕಾಂಗ್ರೆಸ್ (Congress) ಮುಸ್ಲಿಮರ ಓಲೈಕೆಗಾಗಿ ಬಜರಂಗದಳ (Bajrang Dal) ನಿಷೇಧದ ಬಗ್ಗೆ ಹೇಳಿದೆ. ಇದು ಪಿಎಫ್‌ಐ (PFI) ಪ್ರಚೋದಿತ ಪ್ರಣಾಳಿಕೆ. ಪಿಎಫ್‌ಐ ಮನಸ್ಥಿತಿಯವರು, ಮುಸ್ಲಿಂ ಮೂಲಭೂತವಾದಿ ಮನಸ್ಥಿತಿಯವರು ರಚಿಸಿರುವ ಪ್ರಣಾಳಿಕೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ಬಜರಂಗದಳ, ಪಿಎಫ್‌ಐ ನಿಷೇಧ ಸೇರಿ ಹತ್ತು ಹಲವು ಭರವಸೆ: 'ಸರ್ವ ಜನಾಂಗದ ಶಾಂತಿಯ ತೋಟ' ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನೀಡಿರುವಂತಹ ಗ್ಯಾರಂಟಿಗಳ ಬಗ್ಗೆ ವಾಗ್ದಾಳಿ ನಡೆಸಿರುವ ಶರ್ಮಾ, 'ಈಗಾಗಲೇ ಪಿಎಫ್‌ಐ ಬ್ಯಾನ್ ಆಗಿದೆ. ಈಗ ಪಿಎಫ್‌ಐ ಬ್ಯಾನ್ ಮಾಡುತ್ತೇವೆ ಎನ್ನುವುದರಲ್ಲಿ ಏನು ಅರ್ಥ ಇದೆ? ಇದರ ಅರ್ಥ ಇಷ್ಟೇ. ಅವರು ಪಿಎಫ್‌ಐ ಬ್ಯಾನ್ ಮಾಡಿದ್ದಾರೆ, ನಾವು ಅದಕ್ಕೆ ಪರ್ಯಾಯವಾಗಿ ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಲು ಹೊರಟಿದ್ದಾರೆ. ಈ ಮೂಲಕ ಮುಸ್ಲಿಮರ ಓಲೈಕೆ ಮಾಡಲು ಕಾಂಗ್ರೆಸ್ ಹೊರಟಿದೆ ಎಂದು ಹೇಳಿದ್ದಾರೆ.