ಹಾರಂಗಿ ಜಲಾಶಯ 
ರಾಜ್ಯ

ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ!

ಹಾರಂಗಿ ಜಲಾಶಯಲದಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿದ್ದು, ಮುಂಗಾರು ಪೂರ್ವದಲ್ಲಿ ವಾಡಿಕೆಯ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ನೀರಿನ ಮಟ್ಟ ಕುಸಿತ ಕಂಡಿದೆ.

ಕೊಡಗು: ಹಾರಂಗಿ ಜಲಾಶಯಲದಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿದ್ದು, ಮುಂಗಾರು ಪೂರ್ವದಲ್ಲಿ ವಾಡಿಕೆಯ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ನೀರಿನ ಮಟ್ಟ ಕುಸಿತ ಕಂಡಿದೆ.
 
ಕಳೆದ ವರ್ಷ ಇದೇ ಅವಧಿಗೆ ಹೋಲಿಕೆ ಮಾಡಿದರೆ ಆಗ ಇದ್ದ ನೀರಿನ ಮಟ್ಟಕ್ಕಿಂತಲೂ ಈಗ 2 ಟಿಎಂಸಿಯಷ್ಟು ನೀರು ಕುಸಿತ ಕಂಡಿದೆ. ತಾಪಮಾನದ ಏರಿಕೆ ಹಾಗೂ ಮುಂಗಾರು ಪೂರ್ವ ಮಳೆಗಳ ಕೊರತೆಯಿಂದಾಗಿ ನೀರಿನ ಮಟ್ಟ ಕ್ಷೀಣಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆದರೆ ಈಗಲೇ ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.  ಆದರೆ, ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಪೂರ್ವ ಮುಂಗಾರು ವಿಫಲವಾದರೆ, ಅದು ನೀರಿನ ಸಮಸ್ಯೆಗೆ ಕಾರಣವಾಗಬಹುದು ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಹಾರಂಗಿಯಲ್ಲಿ ಕಳೆದ ವರ್ಷ ಇದೇ ಸಮಯದಲ್ಲಿ 4.62 ಟಿಎಂಸಿ ನೀರು ಇದ್ದರೆ, ಈಗ ಅದು 1.95 ಟಿಎಂಸಿಗೆ ಇಳಿದಿದೆ. ಇದಲ್ಲದೆ, ಜಲಾಶಯವು 2018 ರಿಂದ ಯಾವುದೇ ಪರಿಹಾರ ಕಾರ್ಯಕ್ಕೆ ಸಾಕ್ಷಿಯಾಗಿಲ್ಲ ಮತ್ತು ನೈಸರ್ಗಿಕ ವಿಕೋಪ ಪರಿಸ್ಥಿತಿಯ ಪರಿಣಾಮವಾಗಿ ಜಲಾಶಯದೊಳಗೆ ಹೂಳು ಹೆಚ್ಚಿದೆ.

1.95 ಟಿಎಂಸಿಯಲ್ಲಿ ಹೂಳೂ ಸೇರಿದ್ದು, ಕಾವೇರಿ ಜಲಾನಯನ ಪ್ರದೇಶಗಳಾದ ಭಾಗಮಂಡಲ, ತಲಕಾವೇರಿ ಮತ್ತು ಇತರ ಗ್ರಾಮಗಳಲ್ಲಿ ಮಳೆಯ ನಂತರ ನೀರಿನ ಮಟ್ಟ ಹೆಚ್ಚಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಏತನ್ಮಧ್ಯೆ, ಜಿಲ್ಲೆಯ ರೈತರ ಮನವಿ ಮೇರೆಗೆ ಜಲಾಶಯದಿಂದ ಸ್ವಲ್ಪ ಭಾಗವನ್ನು ನೀರಾವರಿ ಉದ್ದೇಶಕ್ಕಾಗಿ ಬಿಡಲಾಗುತ್ತಿದ್ದು, ನೀರಿನ ಮಟ್ಟ ಮತ್ತಷ್ಟು ಕಡಿಮೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!