ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಡಿ.ಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ: ತುರ್ತು ಭೂಸ್ಪರ್ಶ!

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಡಿಕೆ ಶಿವಕುಮಾರ್ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ
Shilpa D
Updated On : 2 May 2023, 2:21 pm

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಮುಳಬಾಗಿಲಿನಲ್ಲಿ ಚುನಾವಣಾ ಪ್ರಚಾರಕ್ಕಾಗಿ ಶಿವಕುಮಾರ್ ಬೆಂಗಳೂರಿನಿಂದ ಕೋಲಾರಕ್ಕೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಮಾರ್ಗ ಮಧ್ಯೆ ಹದ್ದು ಬಂದು ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದಿದೆ. ಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್​ನ ಗಾಜು ಪುಡಿಪುಡಿಯಾಗಿದೆ. ಇದರಿಂದಾಗಿ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದೆ.

ಜಕ್ಕೂರು ಹೆಲಿಪ್ಯಾಡ್‌ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಪೈಲೆಟ್ ಹರಸಾಹಸದಿಂದ ಭಾರಿ ಅನುಹುತ ತಪ್ಪಿದ್ದು ಕೂದಲೆಳೆ ಅಂತರದಲ್ಲಿ ಶಿವಕುಮಾರ್ ಅಪಾಯದಿಂದ ಪಾರಾಗಿದ್ದಾರೆ. ಹದ್ದು ಡಿಕ್ಕಿಯಾದ ರಭಸಕ್ಕೆ ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದೆ. ಡಿಕೆ ಶಿವಕುಮಾರ್ ಜೊತೆಗಿದ್ದ ಇತರ ಕೆಲವರಿಗೆ ಗಾಯಗಳಾಗಿದೆ.  ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Advertisement

ಕೋಲಾರದ ಮುಳಭಾಗಿಲಿನಲ್ಲಿ ಸಾರ್ವಜನಿಕ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹೀಗಾಗಿ ಡಿಕೆ ಶಿವಕುಮಾರ್ ರಸ್ತೆ ಮಾರ್ಗದ ಮೂಲಕ ಕೋಲಾರಕ್ಕೆ ಪ್ರಯಾಣ ಬೆಳೆಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement